ಜಾನಪದ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ದೇಜಗೌ

7

ಜಾನಪದ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ದೇಜಗೌ

Published:
Updated:

ಮೈಸೂರು:  ‘ಏ. 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೀದರ್‌ನಲ್ಲಿ ಅಖಿಲ ಭಾರತ ಜಾನಪದ ಸಾಹಿತ್ಯ ಪ್ರಥಮ ಸಮ್ಮೇಳನ ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಡಾ. ದೇ.ಜವರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಬುಧವಾರ ಇಲ್ಲಿ ಪ್ರಕಟಿಸಿದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯು ಮುಕ್ತ ವಿ.ವಿ. ಕಾವೇರಿ ಸಭಾಂಗಣದಲ್ಲಿ ‘ಜಾನಪದ ಅಧ್ಯಯನದ ವಿವಿಧ ನೆಲೆಗಳು’ ಎಂಬ ವಿಷಯ ಕುರಿತು ಬುಧವಾರ ಏರ್ಪಡಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry