ಗುರುವಾರ , ಮೇ 13, 2021
26 °C

ಜಾನಪದ ಹಬ್ಬ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಶಾಖೆ ವತಿಯಿಂದ ಇದೇ 27ರಂದು ಪಟ್ಟಣದಲ್ಲಿ `ನೆಲಮಂಗಲ ಕರವೇ ಹಬ್ಬ, ಜಾನಪದ ಉತ್ಸವ ಮತ್ತು ಬೃಹತ್ ಸಮಾವೇಶ~ ಹಮ್ಮಿಕೊಳ್ಳಲಾಗಿದೆ.

ಈ ಪ್ರಯುಕ್ತ ಮಧ್ಯಾಹ್ನ 3ಕ್ಕೆ ಗೋಪಿ ವೆಂಕಟೇಶ್ವರ ಕಲ್ಯಾಣ ಮಂಟಪದಿಂದ ಪೇಟೆ ಬೀದಿವರೆಗೂ ಜನಪದ ಕಲೆಗಳ ಪ್ರದರ್ಶನಗಳೊಂದಿಗೆ ಮೆರವಣಿಗೆ, ಸಂಜೆ 6ಕ್ಕೆ ಐಟಿಐ ಕಾಲೇಜು ಆವರಣದಲ್ಲಿ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ ಸಾಹಿತಿ ಸುಧಾ ಬರಗೂರು ತಂಡದವರಿಂದ `ನಗೆ ಹಬ್ಬ~ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಿಗೆ ಗೌರವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಗಣ್ಯರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಜಿ.ಉಮೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.