ಮೈಸೂರು: ‘ಜೆಡಿಎಸ್ ರಾಷ್ಟ್ರೀಯ ಘಟಕ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಿ.ಕೆ. ಜಾಫರ್ ಷರೀಫ್ ಕಾಂಗ್ರೆಸ್ ತೊರೆಯುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಲಲಿತ ಮಹಲ್ ಪ್ಯಾಲೇಸ್ ಹೆಲಿ ಪ್ಯಾಡ್ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಯುವಕರಿಗೆ ಪ್ರಾತಿನಿಧ್ಯ ನೀಡುವ ಸಲುವಾಗಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಇದರಿಂದ ಷರೀಫ್ ಅವರು ಅಸಮಾಧಾನಗೊಂಡಿದ್ದಾರೆ. ಪಕ್ಷದ ತೀರ್ಮಾನದ ಕುರಿತು ಅವರಿಗೆ ಮನವರಿಕೆ ಮಾಡಿಕೊ ಡಲಾಗುವುದು’ ಎಂದು ತಿಳಿಸಿದರು.

ಒಳ ಒಪ್ಪಂದ ಇಲ್ಲ:‘ ರಾಜ್ಯದಲ್ಲಿ ಕಾಂಗ್ರೆಸ್ಗೆ ನೇರ ಎದುರಾಳಿ ಬಿಜೆಪಿ. ಕೆಲ ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ ನೀಡಲಿದೆ. ಬಿಜೆಪಿಯೊಂದಿಗೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಕೋಮುವಾದಿ ಪಕ್ಷದೊಂದಿಗೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರಬಹುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೂರಕ ವಾತಾವರಣ:‘ರಾಜ್ಯದಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ ಇದೆ. ಆಮ್ ಆದ್ಮಿ ಪಕ್ಷ ಈಗ ಮೊಳಕೆ ಯೊಡೆಯುತ್ತಿದೆ. ಜನ ಅದನ್ನು ಯಾವ ರೀತಿ ಸ್ವೀಕರಿ ಸುತ್ತಾರೆ ಎಂಬುದನ್ನು ಕಾದುನೋಡಬೇಕಷ್ಟೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.