ಜಾಮೀನಿಗಾಗಿ ಕಾಂಡಾ ಅರ್ಜಿ

ಬುಧವಾರ, ಮೇ 22, 2019
24 °C

ಜಾಮೀನಿಗಾಗಿ ಕಾಂಡಾ ಅರ್ಜಿ

Published:
Updated:

ನವದೆಹಲಿ (ಐಎಎನ್‌ಎಸ್): ಮಾಜಿ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹರಿಯಾಣಾದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರು ನಿರೀಕ್ಷಣಾ ಜಾಮೀನಿಗಾಗಿ ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ  ಅರ್ಜಿ  ಸಲ್ಲಿಸಿದ್ದಾರೆ.`ಗೀತಿಕಾ ಒಬ್ಬ ಸೂಕ್ಷ್ಮ ಸ್ವಭಾವದ ಹುಡುಗಿ. ದುರ್ಬಲ ಮನಸ್ಸಿನವಳು. ಆಕೆ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದಳು. ಪ್ರತಿ ವಿಚಾರದಲ್ಲೂ ಆಕೆ ಗೊಂದಲಕ್ಕೊಳಗಾಗುತ್ತಿದ್ದಳು~ ಎಂದು  ಅರ್ಜಿಯಲ್ಲಿ ವಿವರಿಸಿದ್ದಾರೆ.`ಎಫ್‌ಐಆರ್ ಅಥವಾ ಆತ್ಮಹತ್ಯೆಗೆ ಮುನ್ನ ಬರೆದಿಟ್ಟ ಪತ್ರದಲ್ಲಿ ಎಲ್ಲೂ ಆತ್ಮಹತ್ಯೆಗೆ ನಾವೇ ಕಾರಣ ಎಂದು ಸೂಚಿಸುವ  ಪುರಾವೆಗಳಿಲ್ಲ. ಆಕೆ ಸೂಕ್ಷ್ಮ ಮನಸ್ಸಿನವಳಾಗಿದ್ದರಿಂದ, ಆಕೆಯ ಸಾವಿಗೆ ಅವರ ಮನಸ್ಥಿತಿಯೇ ಕಾರಣ~  ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಹಿರಿಯ ವಕೀಲರಾದ ಕೆ.ಟಿ.ಎಸ್. ತುಳಸಿ ಅವರು ಆರೋಪಿ ಗೋಯಲ್ ಪರ ಸೋಮವಾರ ಬೆಳಿಗ್ಗೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ವಿಪಿನ್ ಸಾಂಘ್ವಿ ಅವರನ್ನೊಳಗೊಂಡ ವಿಭಾಗೀಯು ಪೀಠದ ಮುಂದೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 9ರಂದು ಗೋಯಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷೆನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry