ಜಾಮೀನಿಗಾಗಿ ಕೃಷ್ಣ ಹೈಕೋರ್ಟ್ ಮೋರೆ

7

ಜಾಮೀನಿಗಾಗಿ ಕೃಷ್ಣ ಹೈಕೋರ್ಟ್ ಮೋರೆ

Published:
Updated:

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್‌ ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಎಚ್.ಎನ್.ಕೃಷ್ಣ ಅವರ ಜಾಮೀನು ಕೋರಿ ಶುಕ್ರವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಗುರುವಾರವಷ್ಟೇ ಕೃಷ್ಣ ಅವರ ಜಾಮೀನು ಅರ್ಜಿಯನ್ನು ನಗರದ ಹದಿನೈದನೇ ತ್ವರಿತ ನ್ಯಾಯಾಲಯ ತಿರಸ್ಕರಿಸಿತ್ತು.  ಅಲ್ಲದೇ ಅಕ್ಟೋಬರ್ 13 ರಂದು ಎಂಟನೇ ಎಸಿಎಂಎಂ ನ್ಯಾಯಾಲಯ ಸಹ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.ಸಿಐಡಿ ಪೊಲೀಸರು ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿ ಕೃಷ್ಣ ಅವರನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಕೃಷ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry