ಶನಿವಾರ, ಏಪ್ರಿಲ್ 17, 2021
32 °C

ಜಾಮೀನಿಗಾಗಿ ಲಂಚ: ಕೋರ್ಟ್‌ಗೆ ಶರಣಾದ ಯುವ ವಕೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನದಲ್ಲಿರುವ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜಾಮೀನಿಗಾಗಿ ಲಂಚ ನೀಡಿದ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಯುವ ವಕೀಲ ಆದಿತ್ಯ ಅವರು ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ನ್ಯಾಯಾಲಯಕ್ಕೆ ಶರಣಾಗಿದ್ದಾರೆ.ಆದಿತ್ಯ ಅವರನ್ನು ನ್ಯಾಯಾಲಯವು ಆಗಸ್ಟ್ 2ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.ಜನಾರ್ದನ ರೆಡ್ಡಿ ಪರ ವಕೀಲರಾದ ಇ. ಉಮಾಮಹೇಶ್ವರ ರಾವ್ ಅವರ ಬಳಿ ಆದಿತ್ಯ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.ಆದಿತ್ಯ ಅವರಿಗೆ ಒಂದು ಕೋಟಿ ರೂಪಾಯಿ ನೀಡಿದ್ದಾಗಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಯಾದಗಿರಿ ವಿಚಾರಣೆಯ ವೇಳೆ ಹೇಳಿಕೆ ನೀಡಿದ್ದ.ಒಬಳಾಪುರಂ ಗಣಿ ಕಂಪೆನಿ ಹಗರಣದ ಪ್ರಮುಖ ಆರೋಪಿಯಾದ ಜನಾರ್ದನ ರೆಡ್ಡಿಅವರ ಪರ ವಕೀಲರಲ್ಲಿ ಒಬ್ಬರಾಗಿರುವ ಹಿರಿಯ ವಕೀಲ ಇ. ಉಮಾಮಹೇಶ್ವರ ರಾವ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೆ ಬಂಧನಕ್ಕೆ ಒಳಗಾದವರಲ್ಲಿ ಆದಿತ್ಯ ಎಂಟನೇಯ ಆರೋಪಿಯಾಗಿದ್ದಾನೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.