ರಾಂಚಿ (ಪಿಟಿಐ): ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಿಂದ ಸೋಮವಾರ ಅವರು ಬಿಡುಗಡೆಯಾಗಿದ್ದಾರೆ.

ಹಗರಣ ಸಂಬಂಧ 5 ವರ್ಷಗಳ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದ ಲಾಲು ಅವರಿಗೆ ಎರಡೂವರೆ ತಿಂಗಳ ಬಳಿಕ ಇದೀಗ ಬಿಡುಗಡೆಯ ಭಾಗ್ಯ ದೊರೆತಿದೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಕುರಿತಾದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತು.

ಈ ವೇಳೆ ಕಾರಾಗೃಹದ ಹೊರಗಡೆ ಜಮಾಯಿಸಿದ್ದ ಆರ್ಜೆಡಿ ಪಕ್ಷದ ನೂರಾರು ಬೆಂಬಲಿಗರು ಲಾಲು ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ತಿರಸ್ಕೃತವಾದ ಬಳಿಕ ಲಾಲು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಡಿ. 13ರಂದು ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.