ಜಾಮೀನು: ಕನಿಮೊಳಿ ಸುಪ್ರೀಂಗೆ ಮೊರೆ

ಶುಕ್ರವಾರ, ಜೂಲೈ 19, 2019
28 °C

ಜಾಮೀನು: ಕನಿಮೊಳಿ ಸುಪ್ರೀಂಗೆ ಮೊರೆ

Published:
Updated:

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದ ಆರೋಪಿಗಳಾದ ಡಿಎಂಕೆ ಸಂಸದೆ ಕನಿಮೊಳಿ ಹಾಗೂ ಕಲೈಙ್ಞರ್ ಟಿ.ವಿಯ ವ್ಯವಸ್ಥಾಪಕ ನಿರ್ದೇಶಕ ಶರತ್ ಕುಮಾರ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.ದೆಹಲಿ ಹೈಕೋರ್ಟ್ ತಮ್ಮ ಜಾಮೀನು ಅರ್ಜಿ ವಜಾ ಮಾಡಿರುವುದನ್ನು ಪ್ರಶ್ನಿಸಿ ಈ ಇಬ್ಬರೂ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿರುವುದಾಗಿ ಅವರ ವಕೀಲ ವಿ.ಜಿ.ಪರಗಸಂ ತಿಳಿಸಿದ್ದಾರೆ.ಕನಿಮೊಳಿ ಮತ್ತು ಶರತ್ ಕುಮಾರ್ ರಾಜಕೀಯವಾಗಿ ಅತ್ಯಂತ ಪ್ರಭಾವಶಾಲಿಗಳಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಇದೇ 8ರಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry