ಜಾಮೀನು: 24ಕ್ಕೆ ಆದೇಶ

7

ಜಾಮೀನು: 24ಕ್ಕೆ ಆದೇಶ

Published:
Updated:

ಬೆಂಗಳೂರು: ವಕೀಲ ವಿನೋದ್‌ಕುಮಾರ್ ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಜಂತಕಲ್ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ವಿನೋದ್ ಗೋಯಲ್ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 24ರಂದು ಆದೇಶ ಪ್ರಕಟಿಸಲಿದೆ.ಗೋಯಲ್ ಜಾಮೀನು ಅರ್ಜಿ ಸಂಬಂಧ ಸೋಮವಾರ ಆದೇಶ ಹೊರಡಿಸುವುದಾಗಿ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಸಮಯ ನಿಗದಿ ಮಾಡಿತ್ತು. ಆದರೆ, ಸೋಮವಾರ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಇದೇ 24ರಂದು ಆದೇಶ ನೀಡುವುದಾಗಿ  ತಿಳಿಸಿದರು.ಪ್ರಕರಣದ ಮೊದಲನೇ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಎರಡನೇ ಆರೋಪಿಯಾಗಿರುವ ಅನಿತಾ ಕುಮಾರಸ್ವಾಮಿ ಗೈರು ಹಾಜರಾಗಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry