ಶನಿವಾರ, ಜನವರಿ 18, 2020
20 °C

ಜಾರ್ಖಂಡ್ ಮಾವೋಗಳಿಂದ ನೆಲಬಾಂಬ್: 13 ಪೊಲೀಸರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಚಿ: ಜಾರ್ಖಂಡ್ ನ ಗಡವಾ ಜಿಲ್ಲೆಯಲ್ಲಿ ಮಾವೋವಾದಿಗಳು ಹುಗಿದಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ ಶನಿವಾರ 13 ಮಂದಿ ಪೊಲೀಸರು ಮೃತರಾಗಿ ಇಬ್ಬರು ಗಾಯಗೊಂಡಿದ್ದಾರೆ.ಭಂಡಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಘಟನೆ ಸಂಬಂಧಿತ ವರದಿ ಬಂದಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೈಕೆಲ್ ರಾಜ್ ತಿಳಿಸಿದ್ದಾರೆ.ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನ ಸಾಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದರು.

 

ಪ್ರತಿಕ್ರಿಯಿಸಿ (+)