ಭಾನುವಾರ, ಮೇ 9, 2021
25 °C

ಜಾರ್ಖಂಡ್: ಹರಿಪ್ರಸಾದ್ ಸಭೆಯಲ್ಲಿ ಗಾಳಿಯಲ್ಲಿ ಗುಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಚಿ (ಪಿಟಿಐ): ಜಾರ್ಖಂಡ್ ಎಐಸಿಸಿ ಉಸ್ತುವಾರಿಯಾಗಿ ಇತ್ತೀಚೆಗೆ ನೇಮಕಂಡಿರುವ ಬಿ. ಕೆ. ಹರಿಪ್ರಸಾದ್ ಅವರು ಶುಕ್ರವಾರ ಪ್ರಥಮ ಬಾರಿಗೆ ಇಲ್ಲಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದಲ್ಲಿನ ವಿರೋಧಿ ಬಣಗಳ ಮಧ್ಯೆ ಘರ್ಷಣೆ ನಡೆಯಿತು ಮತ್ತು ಈ ಗದ್ದಲದಲ್ಲಿ ಯಾರೋ ಗಾಳಿಯಲ್ಲಿ ಗುಂಡು ಹಾರಿಸಿದರು.ಕಾಂಗ್ರೆಸ್ ಭವನದ ಬಳಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಚಾರ ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ತಿಳಿಸಿದ್ದಾರೆ.ಪಕ್ಷದ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡದು ಘರ್ಷಣೆ ಉಂಟಾಯಿತು. ಈ ಸಂದರ್ಭದಲ್ಲಿ ಗುಂಡು ಹಾರಿಸಲಾಯಿತು. ಕಾಂಗ್ರೆಸ್ ಮುಖಂಡರ ಅಂಗರಕ್ಷಕ ಗುಂಡು ಹಾರಿಸಿರಬಹುದು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹರಿಪ್ರಸಾದ್ ಅವರು, ಪಕ್ಷದ ಕಚೇರಿಯ ಹೊರಗಡೆ ಗುಂಡು ಹಾರಿಸಿದ ಸದ್ದು ಕೇಳಿಸಿದೆ, ಈ ಬಗ್ಗೆ ತನಿಖೆ ನಡೆಸುವಂತೆ ಪಿಸಿಸಿ ಅಧ್ಯಕ್ಷ ಸುಖದೇವ್ ಭಗತ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.ಗುಂಡು ಹಾರಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಥವಾ ಮುಖಂಡರು ಭಾಗಿಯಾಗಿದ್ದಾರೆ ಎಂದು ತನಿಖೆಯಿಂದ ಕಂಡುಬಂದರೆ ಅಂತಹ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.ಕಾಂಗ್ರೆಸ್ ಭವನದ ಒಳಗಡೆಯೇ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ವಿಡಿಯೊ ಚಿತ್ರಣದ ಬಗ್ಗೆ ಅವರ ಗಮನ ಸೆಳೆದಾಗ, `ಭವನದ ಒಳಗಡೆ ಏನೂ ನಡೆದಿಲ್ಲ, ಅದಕ್ಕೆ ನಾನೇ ಸಾಕ್ಷಿ' ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.