ಸೋಮವಾರ, ಮೇ 17, 2021
25 °C

ಜಾವಗಲ್: 30 ಗ್ರಾಮಗಳಿಗೆ ಹರಿಯಲಿದೆ ಯಗಚಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾವಗಲ್: ಹೋಬಳಿಯ 30 ಗ್ರಾಮಗಳ ಜನರ ದಶಕಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ. ಗ್ರಾಮಗಳಿಗೆ ಯಗಚಿ ಜಲಾಶಯದಿಂದ ಕುಡಿಯುವ ನೀರೊದಗಿಸುವ ಮೊದಲನೇ ಹಂತದ ಯೋಜನೆ ಪೂರ್ಣಗೊಂಡಿದ್ದು, ಬುಧವಾರದಿಂದ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ.ಹೋಬಳಿಯಲ್ಲಿ ಬರಗಾಲ ತೀವ್ರಗೊಂಡಿರುವುದು ಒಂದೆಡೆಯಾದರೆ, ಹಲವು ದಶಕಗಳಿಂದ ಈ ಭಾಗದ ಜನರು ಫ್ಲೋರೈಡ್‌ಯುಕ್ತ ನೀರು ಕುಡಿಯುತ್ತಿದ್ದಾರೆ. ಯಗಚಿ ಜಲಾಶಯದಿಂದ ಈ ಭಾಗಕ್ಕೆ ಕುಡಿಯುವ ನೀರು ಒದಗಿಸಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿತ್ತು.ಈ ಭಾಗದಲ್ಲಿ ಬರ ತೀವ್ರವಾಗಿರುವುದರಿಂದ ಪ್ರತಿನಿತ್ಯ ನೀರು ಒದಗಿಸುವಂತೆ ಈಚೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು. ರಾಜೀವ್ ಗಾಂಧಿ ಕುಡಿಯುವ ನೀರು ಸರಬರಾಜು ಯೋಜನೆಯ ಮೊದಲ ಹಂತದಲ್ಲಿ ಹೋಬಳಿ ಸೇರಿದಂತೆ ಬುಧವಾರ 17 ಗ್ರಾಮಗಳಿಗೆ ಪ್ರಯೋಗಾರ್ಥವಾಗಿ ನೀರಿನ ಹರಿಸಲಾಯಿತು.ಹೋಬಳಿಗೆ ಬುಧವಾರ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಟಿ. ಅಂಜನ್ ಕುಮಾರ್ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿ ಮುಂದಿನ 3-4 ದಿನಗಳಲ್ಲಿ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಟಾಸ್ಕ್‌ಪೋರ್ಸ್ ಸಮಿತಿಗೆ ಸೂಚನೆ ನೀಡಿದರು.   ವರಪ್ರಸಾದ್‌ರೆಡ್ಡಿ, ಚಂದ್ರಶೇಖರ್, ಶಿವಪ್ಪ, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ರಾಮಚಂದ್ರ, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮಿ ರವಿಶಂಕರ್, ಮಾಜಿ ಸದಸ್ಯ ಶಿವನಂಜೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆಂಚಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಸ್ವಾಮಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.