ಶುಕ್ರವಾರ, ಮೇ 14, 2021
23 °C

ಜಿಂಕೆ ಚರ್ಮ ಮಾರಾಟ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆ ಚರ್ಮಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಘಟಕದ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಮಂಡ್ಯ ಜಿಲ್ಲೆಯ ಚಾಪೂರು ಗ್ರಾಮದವನಾದ ರಘು (22) ಹಾಗೂ ನಗರದ ನಾರಾಯಣಪುರ ನಿವಾಸಿ ಎಂ.ಶ್ರೀನಿವಾಸ (30) ಬಂಧಿತರು. ಆರೋಪಿಗಳು ಜಿಂಕೆಯ ಚರ್ಮಗಳನ್ನು ಮಾರಾಟ ಮಾಡಲು ಮಹದೇವಪುರ ರಸ್ತೆಯಲ್ಲಿ ಗಿರಾಕಿಗಳನ್ನು ಹುಡುಕುತ್ತಿದ್ದರು. ಖಚಿತ ಮಾಹಿತಿಯಿಂದ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಎರಡು ಜಿಂಕೆಯ ಚರ್ಮಗಳನ್ನು ಹಾಗೂ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸೊರಬದವರಾದ ಜೀವನ್ ಎಂಬಾತ ಜಿಂಕೆಯ ಚರ್ಮಗಳನ್ನು ತಂದುಕೊಟ್ಟಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ. ಆತನ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.