ಗುರುವಾರ , ಮೇ 13, 2021
39 °C

ಜಿಂದಾಲ್ ವಿಮಾನ ನಿಲ್ದಾಣದಲ್ಲೂ ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ:  ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ನಿಲ್ದಾಣದಿಂದ ವಿಮಾನವೊಂದನ್ನು ಅಪಹರಿಸುವ ಮೂಲಕ ದಾಳಿ ನಡೆಸುವ ಬಗ್ಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ತೋರಣಗಲ್ ಬಳಿಯ ಜಿಂದಾಲ್ ಖಾಸಗಿ ವಿಮಾನ ನಿಲ್ದಾಣದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.ಒಂದು ವಾರದ ಹಿಂದೆಯೇ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಭಾರತೀಯ ವಿಮಾನಯಾನ ಪ್ರಾಧಿಕಾರದ ಪತ್ರ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಸೂಕ್ತ ಭದ್ರತೆ ಪಡೆಯುವಂತೆ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ವಾಯುಯಾನ ಸಂಚಾರ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.ಭದ್ರತೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗಿದ್ದು, ತಜ್ಞರನ್ನು ಕಳುಹಿಸುವಂತೆ ತಿಳಿಸಲಾಗಿದೆ. ಒಂದು ವಾರದ ಹಿಂದೆಯೇ ಮನವಿ ಮಾಡಿದ್ದರೂ ಈವರೆಗೆ ತಜ್ಞರನ್ನು ಕಳುಹಿಸಿಲ್ಲ ಎಂದು ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆಗೆ ಸಂಬಂಧಿಸಿದ ತಜ್ಞ ಸಿಬ್ಬಂದಿ ಇಲ್ಲ. ಎಎಸ್‌ಐ ಈ ಕುರಿತ ತರಬೇತಿ ಪಡೆದಿದ್ದು, ಅವರನ್ನು ಸೋಮವಾರ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ  ಅವರು `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.