ಮಂಗಳವಾರ, ಏಪ್ರಿಲ್ 20, 2021
24 °C

ಜಿಎಎಆರ್ಗೆ ಹೊಸ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ತೆರಿಗೆ ತಪ್ಪಿಸುವ ಪ್ರವೃತ್ತಿ ತಡೆ ಸಾಮಾನ್ಯ ನಿಯಮಕ್ಕೆ (ಜಿಎಎಆರ್) ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಸಿದ್ದಪಡಿಸಿ ಸೆಪ್ಟೆಂಬರ್ 30ರೊಳಗೆ ಸಲ್ಲಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾರ್ಥಸಾರಥಿ ಅಧ್ಯಕ್ಷತೆಯ ನಾಲ್ವರು ತಜ್ಞರ ಸಮಿತಿಗೆ ಸೂಚಿಸಿದ್ದಾರೆ.ಇತ್ತೀಚೆಗೆ ಹಣಕಾಸು ಸಚಿವಾಲಯ `ಜಿಎಎಆರ್~ ಕರಡು ಪ್ರಕಟಿಸಿತ್ತು. ಆದರೆ, ಪ್ರಧಾನಿ ಗಮನಕ್ಕೆ ತಾರದೆ ಮಾರ್ಗಸೂಚಿ ಅಂತಿಮಗೊಳಿಸಲಾಗಿದೆ ಎಂದು ಪ್ರಧಾನಿ ಕಚೇರಿ ಆರೋಪಿಸಿತ್ತು. ಈ ನಿಟ್ಟಿನಲ್ಲಿ  ಕರಡು ಪ್ರಕಟಗೊಂಡ 15 ದಿನಗಳ ಒಳಗೆ ಹೊಸ ಮಾರ್ಗಸೂಚಿ ಸಿದ್ದಪಡಿಸುವಂತೆ ಸ್ವತಃ ಹಣಕಾಸು ಖಾತೆ ಉಸ್ತುವಾರಿ ವಹಿಸಿಕೊಂಡಿರುವ ಪ್ರಧಾನಿ ಸೂಚಿಸಿದ್ದಾರೆ. ಸಮಿತಿಯು ಹೂಡಿಕೆದಾರರನ್ನು ಸಂಪರ್ಕಿಸಿ, ವಿವಾದಿತ `ಜಿಎಎಆರ್~ ಗೆ ಸಂಬಂಧಿಸಿದಂತೆ ಮಾರ್ಗಸೂಚಿ ಅಂತಿಮಗೊಳಿಸಲಿದೆ~ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.