ಚಿಕ್ಕಬಳ್ಳಾಪುರ: ಅವಿಶ್ವಾಸ ನಿರ್ಣಯ ಮಂಡನೆಯಿಂದ ಬಿ.ಸಾವಿತ್ರಮ್ಮ ಅವರು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸ್ಥಾನ ದಿಂದ ಕೆಳಗಿಳಿದ ಕೂಡಲೇ ಹಲವು ರೀತಿಯ ಬದಲಾವಣೆಗಳು ಕಂಡು ಬರುತ್ತಿವೆ.

ಒಂದೆಡೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ಅವರು ವಿವಿಧ ತಾಲ್ಲೂಕುಗಳಿಗೆ ತೆರಳಿ ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಮತ್ತೊಂದೆಡೆ ಉಪಾಧ್ಯಕ್ಷೆ ಸ್ಥಾನವನ್ನು ಹೇಗಾದರೂ ಹರಸಾಹಸಪಟ್ಟು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

`ಪೂರ್ವಸಂಚಿನಿಂದ ಮತ್ತು ರಾಜಕೀಯ ದುರುದ್ದೇಶದಿಂದ ಸಾವಿತ್ರಮ್ಮ ಅವರನ್ನು ಉಪಾಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸ ಲಾಗಿದೆ. ಇದರ ಕುರಿತು ಕಾನೂನಾತ್ಮಕ ಹೋರಾಟ ಮಾಡ ಲಾಗುವುದು~ ಎಂದು ಒಂದೆಡೆ ಸಿಪಿಎಂ ಮುಖಂಡರು ಹೇಳು ತ್ತಾರೆ. ಆದರೆ ಮತ್ತೊಂದೆಡೆ ಉಪಾಧ್ಯಕ್ಷೆ ಸ್ಥಾನವನ್ನು ಪಡೆದು ಕೊಳ್ಳಲು ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ಬಗೆಬಗೆಯ ತಂತ್ರಗಾರಿಕೆ ಅನು ಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಅವರು ಉಪಾಧ್ಯಕ್ಷೆ ಚುನಾವಣೆ ದಿನಾಂಕ ಘೋಷಣೆಯಾಗುವುದನ್ನೇ ನಿರೀಕ್ಷಿಸುತ್ತಿದ್ದಾರೆ.

ಉಪಾಧ್ಯಕ್ಷೆ ಸ್ಥಾನಕ್ಕೆ ಭಾರಿ ಪೈಪೋಟಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕ ಆದಷ್ಟು ಬೇಗನೇ ಘೋಷಣೆಯಾಗಲಿ ಎಂದು ಕೃಷ್ಣಪ್ಪ ಮತ್ತು ಶೇಖರಪ್ಪ ಅವರು ಬಯಸುತ್ತಿದ್ದಾರೆ ಎನ್ನಲಾಗುತ್ತಿದೆ.

`ಬಿ.ಸಾವಿತ್ರಮ್ಮ ಅವರು ಆಯಾ ತಾಲ್ಲೂಕುಗಳಿಗೆ ತೆರಳಿ ವಸತಿ ನಿಲಯಗಳಿಗೆ ಅಥವಾ ಬೇರೆ ಸ್ಥಳಗಳಿಗೆ ಭೇಟಿ ನೀಡಿ ಪರಿ ಶೀಲನೆ ನಡೆಸಿದರೆ, ಆಕ್ಷೇಪಣೆ ವ್ಯಕ್ತಪಡಿಸಲಾಗುತಿತ್ತು. ಆದರೆ ಈಗ ಸ್ವತಃ ಅಧ್ಯಕ್ಷರೇ ದಿಢೀರ್ನೇ ಎಲ್ಲೆಡೆ ಭೇಟಿ ನೀಡು ತ್ತಿದ್ದಾರೆ. ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.

ಅವರ ಬಗ್ಗೆ ಯಾಕೆ ಆಕ್ಷೇಪಣೆ ವ್ಯಕ್ತವಾಗುತ್ತಿಲ್ಲ~ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಆಯಾ ತಾಲ್ಲೂಕುಗಳಿಗೆ ಭೇಟಿ ನೀಡುತ್ತಿರುವ ಬಗ್ಗೆ `ಪ್ರಜಾವಾಣಿ~ಗೆ ತಿಳಿಸಿದ ಕೃಷ್ಣಪ್ಪ, `ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ ಎಲ್ಲೆಡೆ ಭೇಟಿ ನೀಡುತ್ತಿದ್ದೇನೆ. ತಪ್ಪುಗಳಿದ್ದಲ್ಲಿ, ಅದನ್ನು ಸರಿಪಡಿಸಲು ಯತ್ನಿಸುತ್ತಿದ್ದೇನೆ.

ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಇಲಾಖೆ ಅಥವಾ ಕಚೇರಿಯವರು ಗೈರುಹಾಜರಾಗ್ದ್ದಿದಲ್ಲಿ, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ~ ಎಂದರು.

`ಸಾವಿತ್ರಮ್ಮ ಮತ್ತೆ ಉಪಾಧ್ಯಕ್ಷೆಯಾಗಲಿ~
ಸಂವಿಧಾನದತ್ತ ಮೀಸಲಾತಿ ಸೌಲಭ್ಯ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವ ರೀತಿಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಮೂಲಕ ಬಿ.ಸಾವಿತ್ರಮ್ಮ ಅವರನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸಿದ್ದು ಖಂಡನೀಯ ಎಂದು ರಾಜ್ಯ ಜನವಾದಿ ಮಹಿಳಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಹಿಂದುಳಿದ ವರ್ಗ ಎ (ಮಹಿಳೆ) ಮೀಸಲಾತಿ ಸೌಲಭ್ಯದಿಂದ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಸಾವಿತ್ರಮ್ಮ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುತ್ತಿದ್ದರು. ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ, ಅವುಗಳನ್ನು ಪರಿಹಿಸುವಂತೆ ಒತ್ತಾಯಿಸುತ್ತಿದ್ದರು.

ಇದು ಅಧಿಕಾರಿಗಳಿಗೆ ಮತ್ತು ಜಿಲ್ಲಾಪಂಚಾಯಿತಿಯ ಇತರ ಸದಸ್ಯರಿಗೆ ಮುಜುಗರವಾಗುತಿತ್ತು ಎಂಬ ನೆಪವನ್ನೊಡ್ಡಿ ಅವರನ್ನು ಉಪಾಧ್ಯಕ್ಷೆ ಸ್ಥಾನದಿಂದ ವಂಚಿತಗೊಳಿಸಿರುವುದು ಸರಿಯಲ್ಲ~ ಎಂದರು.

`ಉಪಾಧ್ಯಕ್ಷೆ ಸ್ಥಾನಕ್ಕೆ ಈ ಕೂಡಲೇ ಚುನಾವಣೆ ನಡೆಸಬೇಕು. ಉಪಾಧ್ಯಕ್ಷೆ ಸ್ಥಾನವನ್ನು ಸಾವಿತ್ರಮ್ಮ ಅವರಿಗೆ ದಕ್ಕುವಂತೆ ಮಾಡಬೇಕು. ನಿಯಮ ಉಲ್ಲಂಘಿಸಿ, ವಂಚನೆ ಮಾಡಿದ್ದಲ್ಲಿ, ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು~ ಎಂದು ಅವರು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.