ಗುರುವಾರ , ಅಕ್ಟೋಬರ್ 17, 2019
27 °C

ಜಿ.ಪಂ. ಅಧ್ಯಕ್ಷ ಕೃಷ್ಣಪ್ಪ

Published:
Updated:

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಗುಡಿಬಂಡೆ ತಾಲ್ಲೂಕಿನ ಸೋಮೇನ ಹಳ್ಳಿ ಕ್ಷೇತ್ರದ ಪಂಚಾಯಿತಿ ಸದಸ್ಯ ಕಾಂಗ್ರೆಸ್‌ನ ಎಂ.ವಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಚುನಾವಣೆ ಯಲ್ಲಿ ಅವರು ಅವಿರೋಧ ವಾಗಿ ಆಯ್ಕೆಯಾದರು.ಮಂಗಳವಾರ ನಡೆದ ಚುನಾವಣೆಯಲ್ಲಿ ಕೃಷ್ಣಪ್ಪ ಅವರು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಇದರ ಹಿನ್ನೆಲೆಯಲ್ಲಿ ಕೃಷ್ಣಪ್ಪ ಅವರೇ ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಪ್ರಾದೇಶಿಕ ಆಯುಕ್ತ ಶಂಕರ್‌ದಯಾಳ್ ಮೀನಾ ತಿಳಿಸಿದರು. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೃಷ್ಣಪ್ಪ ಅವರನ್ನು ಶಾಸಕ ಎನ್.ಸಂಪಂಗಿ ಮತ್ತು ಜಿ.ಪಂ.ಮಾಜಿ ಅಧ್ಯಕ್ಷ ಚಿನ್ನಪ್ಪಯ್ಯ ಅಭಿನಂದಿಸಿದರು.

Post Comments (+)