ಬುಧವಾರ, ಮೇ 25, 2022
29 °C

ಜಿಲ್ಲಾಧಿಕಾರಿಗೆ ನಾಲ್ಕು ವರ್ಷ ವರ್ಗಾವಣೆ ಬೇಡ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರನ್ನು ಇನ್ನೂ ನಾಲ್ಕು ವರ್ಷ ವರ್ಗಾವಣೆ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದರು.ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗ ನಡೆಯುತ್ತಿರುವ ಕಾಮಗಾರಿಗಳು ಬೇಗ ಪೂರ್ಣಗೊಳ್ಳಬೇಕಾದರೆ ಇವರ ಸೇವೆ ಜಿಲ್ಲೆಗೆ ಕನಿಷ್ಠ 4 ವರ್ಷ ಬೇಕು ಎಂದರು.ಇದಕ್ಕೂ ಮುನ್ನ ನಗರದ ಗಾಂಧಿಪಾರ್ಕ್‌ನಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿ, ಯೋಜನೆ ಸಂಪೂರ್ಣ ಆಗುವವರೆಗೂ ನೀವು ವರ್ಗಾವಣೆ ಮಾಡಿಸಿಕೊಳ್ಳುವಂತಿಲ್ಲ ಎಂದು ಪೊನ್ನುರಾಜ್ ಅವರಿಗೆ ಸೂಚಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.