ಸೋಮವಾರ, ಜನವರಿ 20, 2020
27 °C

ಜಿಲ್ಲಾಧಿಕಾರಿ ಅಮಾನತಿಗೆ ಆಗ್ರಹಿಸಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಈಚೆಗೆ ನ್ಯಾಯಯುತ ಹೋರಾಟ ನಡೆಸುತ್ತಿದ್ದ ಕರ್ನಾಟಕ ರೈತ ಸಂಘದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಲು ಕಾರಣರಾದ ಜಿಲ್ಲಾಧಿಕಾರಿ ಎಸ್‌.­ಎನ್‌.­­ನಾಗರಾಜ ಅವರನ್ನು ಸೇವೆ­ಯಿಂದ ಅಮಾನತು­ಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸೋಮವಾರ ತಹಶೀ­ಲ್ದಾರ್‌ ಎಂ.ಐ.ಶಹನೂರು ಅವರಿಗೆ ಮನವಿ ಪತ್ರ ಸಲ್ಲಿಸಿದರು.ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಸರ್ಕಾರಿ ಭೂಮಿ ಸಾಗುವಳಿ ಮಾಡುತ್ತಿರುವ ಭೂಹೀನ ರೈತರಿಗೆ ಭೂಮಿ ಪಟ್ಟಾ ನೀಡಬೇಕು. ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ವಸತಿ ಹೀನರಿಗೆ ಹಕ್ಕು ಪತ್ರ ನೀಡಬೇಕು. ಮಾನ್ವಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿದವರನ್ನು ಬಂಧಿಸುವುದು ಸೇರಿದಂತೆ ಮುಖ್ಯ­ಮಂತ್ರಿಗೆ ಬರೆದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್‌ ಅವರಿಗೆ ಸಲ್ಲಿಸಲಾಯಿತು.ಕರ್ನಾಟಕ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಮುದುಕಪ್ಪ ನಾಯಕ, ಪ್ರಧಾನ ಕಾರ್ಯದರ್ಶಿ ಅಶೋಕ ನಿಲೋಗಲ್ಕರ್‌, ಅಶೋಕ ತಡಕಲ್‌ ಮತ್ತಿತರ ಪದಾಧಿಕಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)