ಜಿಲ್ಲಾಮಟ್ಟದಲ್ಲಿ ವಿಪತ್ತು ನಿರ್ವಹಣಾ ಕೋಶ

7

ಜಿಲ್ಲಾಮಟ್ಟದಲ್ಲಿ ವಿಪತ್ತು ನಿರ್ವಹಣಾ ಕೋಶ

Published:
Updated:

ಹಾಸನ: `ರಾಷ್ಟ್ರದಲ್ಲಿ ಈಚಿನ ಒಂದು ದಶಕದಲ್ಲಿ ಸಂಭವಿಸಿದ ಗುಜರಾತ್ ಭೂಕಂಪ, ಸುನಾಮಿಯಂಥ ಭಾರಿ ದುರಂತಗಳಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆ ಜಾರಿಗೆ ತಂದಿದ್ದು, ಎಲ್ಲ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಕೋಶ ತೆರೆಯಲು ತೀರ್ಮಾನಿಸಿದೆ~ ಎಂದು ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಸಂಪನ್ಮೂಲ ವ್ಯಕ್ತಿ ಡಾ. ಧರ್ಮರಾಜ್ ತಿಳಿಸಿದರು.ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ವಿಪತ್ತು ನಿರ್ವಹಣೆ ಯೋಜನೆ ರೂಪಿಸುವ ನಿಟ್ಟಿನಲ್ಲಿ ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮೈಸೂರು ಪ್ರಾದೇಶಿಕ ವಿಭಾಗದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.`ಈ ವರ್ಷಾಂತ್ಯದಲ್ಲಿ ರಾಜ್ಯ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಕೋಶಗಳು ಕಾರ್ಯಾರಂಭ ಮಾಡಲಿವೆ. ಅದೇರೀತಿ ಜಿಲ್ಲೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮರ್ಪಕವಾಗಿ ಎಲ್ಲ ಸ್ವರೂ ಪದ ವಿಕೋಪಗಳ ಅಂದಾಜು, ಅದನ್ನು ನಿಯಂತ್ರಿ ಸಲು, ನಿರ್ವಹಿಸಲು ಸೂಕ್ತ ಯೋಜನೆಯನ್ನು ರೂಪಿಸ ಬೇಕಿದೆ. ಇದಕ್ಕೆ ಪೂರಕವಾದ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷರು ಗಳಾದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಹ ಅಧ್ಯಕ್ಷರಾದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಕಂದಾಯ ಇಲಾಖೆ ಉಪ ಕಾರ್ಯದರ್ಶಿ, ಹೆಚ್ಚುವರಿ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹಾಸನ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಸಭೆ ಉದ್ಘಾಟಿಸಿದರು.ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ, ಕೊಡಗು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಪ್ಪ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ದಕ್ಷಣ ಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೊರಗಪ್ಪ ನಾಯಕ, ದಕ್ಷಣ ಕನ್ನಡ ಜಿಲ್ಲಾಧಿಕಾರಿ ಚನ್ನಪ್ಪಗೌಡ, ಉಡುಪಿ ಜಿಲ್ಲಾಧಿಕಾರಿ ಎಂ.ಟಿ. ರೇಜು, ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಹಾಸನ ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಎಚ್.ಸಿ. ಪುಟ್ಟಸ್ವಾಮಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪಿ. ಶಿವಶಂಕರ್ ವಿವಿಧ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳು, ಹಾಸನ ಉಪವಿಭಾಗಾಧಿಕಾರಿ ಗಳಾದ ಜಗದೀಶ ಹಾಗೂ ಶ್ರೀವಿದ್ಯಾ ಮತ್ತಿತರರು ಪಾಲ್ಗೊಂಡಿದ್ದರು.ವಿಪತ್ತು ನಿರ್ವಹಣೆ ಪ್ರಾಧಿಕಾರದ ಮಹೇಂದ್ರ ಅವರು ವಿವಿಧ ಸ್ವರೂಪದ ಪ್ರಾಕೃತಿಕ ವಿಕೋಪ, ಇದನ್ನು ನಿರ್ವಹಿಸಲು ಕೈಗೊಳ್ಳಬೇಕಾದ ಸಿದ್ಧತೆಗಳು, ಜಿಲ್ಲಾಧಿಕಾರಿ ಹೊಣೆಗಾರಿಕೆ ಮತ್ತಿತರ ವಿಚಾರ ತಿಳಿಸಿದರು.

ಸಮಾಲೋಚನೆ ನಂತರ ಪ್ರತಿ ಜಿಲ್ಲೆಯಿಂದ ಮೂರರಿಂದ ಐದು ಮಂದಿ ಅಧಿಕಾರಿಗಳ ತಂಡವನ್ನು ಮೈಸೂರಿನ ಆಡಳಿತ ತರಬೇತಿ ಕೇಂದ್ರಕ್ಕೆ ಕಳುಹಿಸಿ ಜಿಲ್ಲಾ ಮಟ್ಟದಲ್ಲಿ ವಿಕೋಪ ನಿರ್ವಹಣೆ ಯೋಜನೆ ಹೇಗೆ ಸಿದ್ಧಪಡಿಸಬೇಕೆಂಬ ತರಬೇತಿ ನೀಡಿ ಜಿಲ್ಲೆಯ ಎಲ್ಲ ಗ್ರಾಮಗಳನ್ನೊಳಗೊಂಡಂತೆ ವಿವಿಧ ರೀತಿಯ ನಿರೀಕ್ಷಿತ ವಿಪತ್ತು ಹಾಗೂ ಅದರ ನಿರ್ವಹಣೆಗೆ ಪೂರ್ವತಯಾರಿ ಯೋಜನೆ ರೂಪಿಸಲು ತೀರ್ಮಾನಿ ಸಲಾಯಿತು.

ಹಾಸನ ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಅಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು. ಹಾಸನ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಸ್ವಾಗತಿಸಿ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry