ಶನಿವಾರ, ಜೂನ್ 19, 2021
26 °C

ಜಿಲ್ಲಾಸ್ಪತ್ರೆ ನೂತನ ಕಟ್ಟಡ ಲೋಕಾರ್ಪಣೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ:  ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಉದ್ದೇಶದಿಂದ ನಿರ್ಮಿಸಲಾ ಗಿರುವ ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಿ ರುವ ನೂತನ ವೈದ್ಯಕೀಯ ಕಟ್ಟಡ ಸೇವೆಗೆ ಸಜ್ಜಾಗಿದ್ದು, ಮಾ. 4ರಂದು ಲೋಕಾರ್ಪಣೆಗೊಳ್ಳಲಿದೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ‘ಅಂದು ಮಧ್ಯಾಹ್ನ 2 ಗಂಟೆಗೆ ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡ ಲಾಗುವುದು. ಇದೇ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾ ಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗು ವುದು. ಸಂಜೆ 4 ಗಂಟೆಗೆ ಸೇಡಂ ತಾಲ್ಲೂಕು ಮಳಖೇಡನಲ್ಲಿ ₨1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗು ತ್ತಿರುವ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗು ವುದು’ ಎಂದರು.‘ಗುಲ್ಬರ್ಗ, ಮೈಸೂರು, ಬೆಳಗಾವಿ ಯಲ್ಲಿ ತಲಾ ₨ 150 ಕೋಟಿ ವೆಚ್ಚದಲ್ಲಿ ಹಾಗೂ ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ಕೇಂದ್ರದ ನೆರವಿನೊಂದಿಗೆ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು. ಪ್ರತಿಯೊಂದು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಉಪಕರಣ ಗಳು, ಚಿಕಿತ್ಸೆ ಲಭ್ಯವಾಗಲಿದೆ’ ಎಂದು ಹೇಳಿದರು.‘ರಾಜ್ಯದಲ್ಲಿ 60 ವರ್ಷಗಳಲ್ಲಿ 10 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸ ಲಾಗಿದ್ದರೆ, ಕಳೆದ 9 ತಿಂಗಳಲ್ಲಿ 12 ಕಾಲೇಜುಗಳಿಗೆ ಅನುಮೋದನೆ ನೀಡಲಾ ಗಿದೆ. ಗುಲ್ಬರ್ಗ ಹಾಗೂ ಮಂಡ್ಯದಲ್ಲಿ ತಲಾ ₨ 45 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಘಟಕಗಳನ್ನು ಆರಂಭಿಸಲಾಗುತ್ತಿದೆ’ ಎಂದು ತಿಳಿಸಿದರು.‘ಆರು ಜಿಲ್ಲೆಗಳಲ್ಲಿ ಆರಂಭಿಸಲಾ ಗುತ್ತಿರುವ ವೈದ್ಯಕೀಯ ಕಾಲೇಜುಗಳಿಗೆ ಬೋಧಕ/ ಬೋಧಕೇತರ ಸೇರಿದಂತೆ 730 ಹುದ್ದೆಗಳನ್ನು ಭರ್ತಿ ಮಾಡಲಾ ಗಿದೆ. ಈ ಪೈಕಿ ಗುಲ್ಬರ್ಗ ಮತ್ತು ಕೊಪ್ಪಳದ ಕಾಲೇಜುಗಳ ನೇಮಕಾತಿ ಯಲ್ಲಿ 371 (ಜೆ) ಕಲಂ ಅನ್ವಯ ಸ್ಥಳೀ ಯರಿಗೆ ಶೇ 75ರಷ್ಟು ಹಾಗೂ ಇನ್ನುಳಿದ ನಾಲ್ಕು ಜಿಲ್ಲೆಗಳಲ್ಲಿ ಶೇ 8ರಷ್ಟು ಮೀಸಲಾತಿ ನೀಡಲಾಗಿದೆ’ ಎಂದರು.ಆಸ್ಪತ್ರೆ ವಿಶೇಷ: ಸೇಡಂ ರಸ್ತೆಯಲ್ಲಿರುವ 35 ಎಕರೆ ವಿಶಾಲವಾದ ಪ್ರದೇಶದಲ್ಲಿ ₨ 49 ಕೋಟಿ ವೆಚ್ಚದಲ್ಲಿ ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲಾಗಿದೆ. ಹಳೆಯ ಆಸ್ಪತ್ರೆಯಲ್ಲಿ 400 ಹಾಸಿಗೆಗಳ ಸೌಲಭ್ಯ ವಿದ್ದರೆ, ಈ ಆಸ್ಪತ್ರೆಯಲ್ಲಿ 500 ಹಾಸಿಗೆ ಗಳ ಸೌಲಭ್ಯ ಕಲ್ಪಿಸಲಾಗಿದೆ. ಹೀಗಾಗಿ, ಒಟ್ಟು 900 ಹಾಸಿಗೆ ಲಭ್ಯವಾಗಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.