ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

7

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Published:
Updated:

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇದೇ 19ರಿಂದ  21ರವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಅಕ್ಟೋಬರ್ 19ರಂದು ಕುಂದಾಪುರ  ಪಂಚಾಯಿತಿ ಸಭಾಂಗಣದಲ್ಲಿ ಕುಂದಾಪುರ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸುವರು.20ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ತಾಲ್ಲೂಕಿನ ಹಿರಿಯಡ್ಕ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಉಡುಪಿ ಮಣಿಪಾಲದ ರಜತಾದ್ರಿಯಲ್ಲಿ ಸಾರ್ವಜನಿಕರ ಭೇಟಿ ಮಾಡುವರು.  ಮಧ್ಯಾಹ್ನ 1 ಗಂಟೆಗೆ ಸಾಲಿಗ್ರಾಮ ಗುಂಡ್ಮಿ ಭಗವತಿ ದೇವಸ್ಥಾನದ ಶಾರದೋತ್ಸವದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಮಂಗಳೂರು ತುಂಬೆ ಶಾರದೋತ್ಸವದಲ್ಲಿ ಪಾಲ್ಗೊಳ್ಳುವರು.21ರಂದು ಬೆಳಿಗ್ಗೆ 10 ಗಂಟೆಗೆ ಬೈಲೂರು ಮಹಿಷ ಮರ್ದಿನಿ ದೇವಸ್ಥಾನದ ಹತ್ತಿರ ಯಶಸ್ವಿ ಕ್ರಿಯೇಷನ್ ಶಿಲಾನ್ಯಾಸದಲ್ಲಿ ಭಾಗವಹಿಸುವರು. ಬೆಳಿಗ್ಗೆ 11 ಗಂಟೆಗೆ ಕಾರ್ಕಳ ತಾಲ್ಲೂಕಿನ ಬಜಗೋಳಿ ಬಿಲ್ಲವ ಸಂಘ ಗುರು ಪೂಜೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ಬಾರ್ಕೂರು ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry