ಭಾನುವಾರ, ಮೇ 9, 2021
25 °C

ಜಿಲ್ಲಾ ಉಸ್ತುವಾರಿ ಸಚಿವರ ಬಳಿ ನಿಯೋಗ; ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಭಾನುವಾರ ನಡೆದ ಕಸಾಪ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.    



ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಕಸಾಪ ಜಿಲ್ಲಾ ಘಟಕವು ಬೆಂಗಳೂರಿಗೆ ನಿಯೋಗ ತೆರಳಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಸಮ್ಮೇಳನದ ಪೂರ್ವಸಿದ್ಧತೆ ಕೈಗೊಳ್ಳುವ ಬಗ್ಗೆ ಸಭೆ ಕರೆಯುವಂತೆ ಆಹ್ವಾನ ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.



ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸಮ್ಮೇಳನ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿಯೇ ನಾನಾ ಪುಸ್ತಕ ಪ್ರಕಟಣೆ ಹೊರತರಲಾಗುತ್ತಿದ್ದು, ಆ ದಿಸೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಕಲೆ, ಸಾಹಿತ್ಯ, ಜನಪದ, ಕ್ರೀಡೆ, ಸೇನೆ, ಕೃಷಿ ಹೀಗೆ ವಿವಿಧ ಪ್ರಕಾರದ ಸಾಹಿತ್ಯಾಭಿರುಚಿಯ ಲೇಖನಗಳನ್ನು ಹೊರತರಲು ಅವಕಾಶವಿದೆ ಎಂದರು.



ಜಿಲ್ಲೆಯ ಲೇಖಕರು ಗುಣಾತ್ಮಕ ಬರಹಗಳನ್ನು ಕಸಾಪ ಜಿಲ್ಲಾ ಘಟಕಕ್ಕೆ ಕಳುಹಿಸಿಕೊಡುವಂತೆ ಅವರು ಕೋರಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸುವ ಸ್ಥಳ, ದಿನಾಂಕ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಜಿಲ್ಲಾ ಕಸಾಪ ಕಾರ್ಯದರ್ಶಿ ಬಿ.ಎ.ಷಂಶುದ್ದೀನ್, ಬಿ.ಎಂ.ಕೆ.ವಾಸು ರೈ, ಶ್ವೇತಾ ರವೀಂದ್ರ, ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ಮುನೀರ್ ಅಹಮದ್, ಎಂ.ಪಿ. ಕೇಶವ ಕಾಮತ್, ಬಿ.ಎನ್. ಪ್ರಕಾಶ್, ಶ್ರಿಧರ ಹೆಗಡೆ, ಮಹಾಬಲೇಶ್ವರ ಭಟ್, ಜೆ.ಸಿ.  ಶೇಖರ್,  ಜಲಜಾ ಶೇಖರ್, ಪುಷ್ಪಾ ಸಮ್ಮೇಳನ ಹಮ್ಮಿಕೊಳ್ಳುವ ಕುರಿತು ಹಲವು ಸಲಹೆಗಳನ್ನು ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.