ಸೋಮವಾರ, ಜೂನ್ 21, 2021
28 °C

ಜಿಲ್ಲಾ ಉಸ್ತುವಾರಿ ಸಚಿವ, ಇಬ್ಬರು ಶಾಸಕರ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಹುಬ್ಬಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಸಮಾವೇಶಕ್ಕೆ ಜಿಲ್ಲೆಯಿಂದ 300 ಬಸ್‌ಗಳು ತೆರಳಿದ್ದು, ನಿತ್ಯದ ಮಾರ್ಗಗಳಲ್ಲಿ ಬಸ್ ಸಂಚಾರ ಇಲ್ಲದೇ ಜನ ಸಾಮಾನ್ಯರು ಪರದಾಡುವಂತಾಯಿತು.ಹೊನ್ನಾಳಿ ತಾಲ್ಲೂಕಿನಿಂದ ಅತಿ ಹೆಚ್ಚು ಅಂದರೆ 100 ಬಸ್, ಚನ್ನಗಿರಿಯಿಂದ 35, ಹರಿಹರದಿಂದ 25, ಜಗಳೂರಿನಿಂದ 30 ಹಾಗೂ ಹರಪನಹಳ್ಳಿ, ದಾವಣಗೆರೆಯಿಂದ 110 ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದರಲ್ಲಿ ಶೇ. 50 ಕೆಎಸ್‌ಆರ್‌ಟಿಸಿಯಿಂದ ಬಾಡಿಗೆ ಪಡೆದರೆ, ಉಳಿದ ಶೇ. 50ರಷ್ಟು ಖಾಸಗಿ ಬಸ್.ಹೊನ್ನಾಳಿ ಹಾಗೂ ಜಗಳೂರು, ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನಲ್ಲಿ ಹೆಚ್ಚಾಗಿ ಬಸ್ ಕೊರತೆ ಕಂಡುಬಂದಿದ್ದು, ಗ್ರಾಮೀಣ ಪ್ರದೇಶಗಳಿಗೆ ತೆರಳುವ ಪ್ರಯಾಣಿಕರು ಪರದಾಡುವಂತಾಯಿತು.ಸದಾ ಬಸ್ ನಿಲುಗಡೆಯಿಂದ ಗಿಜಿಗುಡುತ್ತಿದ್ದ ಖಾಸಗಿ ಬಸ್‌ನಿಲ್ದಾಣದಲ್ಲಿ ಭಾನುವಾರ ಬಸ್‌ಗಳ ಸಂಖ್ಯೆ ವಿರಳವಾಗಿತ್ತು. ಕೆಲ ಮಾರ್ಗಗಳಲ್ಲಿ ಸಂಚರಿಸಲು ಪ್ರಯಾಣಿಕರು ಗಂಟೆಗಟ್ಟಲೆ ಕಾಯುವಂತಾಯಿತು. ಇತರೆ ಡಿಪೋಗಳಿಂದಲೂ ಕೆಎಸ್‌ಆರ್‌ಟಿಸಿ ಬಸ್ ಬಾಡಿಗೆ ಪಡೆದ ಕಾರಣ, ಕೆಲ ಮಾರ್ಗಗಳಲ್ಲಿ ಮಾತ್ರ ಪ್ರಯಾಣಿಕರಿಗೆ ಅನನುಕೂಲವಾಯಿತು.ಜಿಲ್ಲೆಯಿಂದ ಸಂಸತ್ ಸದಸ್ಯ ಜಿ.ಎಂ. ಸಿದ್ದೇಶ್ವರ, ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಬಿ.ಪಿ. ಹರೀಶ್, ಎಸ್.ವಿ. ರಾಮಚಂದ್ರ ಸಮಾವೇಶಕ್ಕೆ ತೆರಳುವವರ ಜವಾಬ್ದಾರಿ ಹೊತ್ತಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್, ಮಾಜಿ ಸಚಿವ ಜಿ. ಕರುಣಾಕರ ರೆಡ್ಡಿ ಹಾಗೂ ಶಾಸಕ ಎಂ. ಬಸವರಾಜನಾಯ್ಕ ಸಮಾವೇಶಕ್ಕೆ ಹೋಗಿರಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.