ಚಾಮರಾಜನಗರ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶ್ವ ಕನ್ನಡ ಸಮ್ಮೇಳನವನ್ನು ಇನ್ಫೋಸಿಸ್ನ ಎನ್. ಆರ್. ನಾರಾಯಣಮೂರ್ತಿ ಉದ್ಘಾ ಟಿಸಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಜಿಲ್ಲಾ ಕನ್ನಡ ಸಂಘಟನೆ ಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ನಾರಾಯಣಮೂರ್ತಿ ಅವರ ಪ್ರತಿಕೃತಿ ದಹಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಾರಾಯಣಮೂರ್ತಿ ಕನ್ನಡದ ವಿರೋಧಿ ಧೋರಣೆ ತಳೆದಿದ್ದಾರೆ. ಅಂಥವರಿಂದ ಸಮ್ಮೇಳನ ಉದ್ಘಾಟಿಸಲಾಗಿದೆ.

ಸರ್ಕಾರದ ಈ ನಿರ್ಧಾರ ಖಂಡನೀಯ. ಕನ್ನಡಪರ ಸಂಘಟನೆಗಳ ವಿರೋಧದ ನಡುವೆಯೂ ನಿರ್ಧಾರ ಹಿಂದಕ್ಕೆ ತೆಗೆದು ಕೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.ನಾರಾಯಣಮೂರ್ತಿ ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಬಂಡವಾಳಶಾಹಿತನ ಪ್ರದರ್ಶನ ಮಾಡುತ್ತಿದ್ದಾರೆ. ನಾಡಿನ ಹಿರಿಯ ಸಾಹಿತಿಗಳು, ಕನ್ನಡ ಚಳವಳಿ ಹೋರಾಟಗಾರರಿಂದ ಉದ್ಘಾಟನೆ ಮಾಡಿಸಬೇಕಿತ್ತು. ಸಮ್ಮೇಳನಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅಲ್ಲಿರುವುದು ಅಧಿಕಾರಿಗಳ ಪರ್ವ ಎಂದು ಟೀಕಿಸಿದರು. ಒಕ್ಕೂಟದ ಅಧ್ಯಕ್ಷ ಶಾ. ಮುರಳಿ, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಸುರೇಶ್ನಾಯಕ್, ಗು. ಪುರುಷೋತ್ತಮ್, ಚಾ.ವೆಂ. ರಾಜಗೋಪಾಲ್, ಚಾ.ಗು. ನಾಗರಾಜ್ ಇತರರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.