ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ

7

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ

Published:
Updated:

ಹಾಸನ: `ವಿದ್ಯಾರ್ಥಿಗಳು ಕಲಿಕೆಯಲ್ಲಿ ಪ್ರಗತಿ ಸಾಧಿಸಬೇಕು ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನವರು ಜಿಲ್ಲೆಯ 110 ಸರ್ಕಾರಿ ಪ್ರೌಢಶಾಲೆಗಳನ್ನು ಆಯ್ಕೆಮಾಡಿಕೊಂಡು ರೂ 8.50ಕೋಟಿ ವೆಚ್ಚದಲ್ಲಿ ಕಲಿಕಾ ಸಾಮಗ್ರಿ ಪೂರೈಸುತ್ತಿರುವುದು ಶ್ಲಾಘನೀಯ ವಿಚಾರ~ ಎಂದು ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ ಸಂತಸ ವ್ಯಕ್ತಪಡಿಸಿದರು.  ಹಾಸನ ತಾಲ್ಲೂಕಿನ ದೊಡ್ಡಗದ್ದವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಳವಡಿಸಿರುವ ಸಾತ್ ಸೆಂಟರ್‌ನ್ನು ಉದ್ಘಾಟಿಸಿ ಅವರು ನುಡಿದರು.ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ವತಿಯಿಂದ ಮೊದಲ ಹಂತದಲ್ಲಿ ಚನ್ನರಾಯಪಟ್ಟಣ ತಾಲ್ಲೂಕಿನ ಜುಟ್ಟನಹಳ್ಳಿ, ಹೊಳೆನರಸೀಪುರ ತಾಲ್ಲೂಕಿನ ಸಂಕನಹಳ್ಳಿ ಮತ್ತು ಹಾಸನ ತಾಲ್ಲೂಕಿನ ದೊಡ್ಡಗದ್ದವಳ್ಳಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಸಾತ್ ಸೆಂಟರ್‌ಗಳನ್ನು ತೆರೆಯಲಾಗಿದೆ. ವಿದ್ಯಾರ್ಥಿ ಮತ್ತು ಶಿಕ್ಷಕರು ಇದರ ಸಮರ್ಪಕ ಉಪಯೋಗ ಪಡೆಯಬೇಕು~ ಎಂದರು.ಹಾಸನ ಕ್ಷೇತ್ರದ ಶಾಸಕರಾದ ಎಚ್. ಎಸ್.ಪ್ರಕಾಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ,  ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಬೆಂಗಳೂರು ಕೇಂದ್ರದ ಮುಖ್ಯ ವ್ಯವಸ್ಥಾಪಕ ನರೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ  ಎ.ಟಿ.ಚಾಮರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಟ್ಟರಾಜು, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಮುರಳಿ, ತನುಜಾ, ಚಂದ್ರೇಗೌಡ, ಜಯರಾಮು, ಕುಮಾರ್, ಶಣ್ಮುಖ, ಮಹೇಂದ್ರ,  ಮತ್ತಿತರರು ಇದ್ದರು.ಸದಸ್ಯದಲ್ಲೇ ನಿವೃತ್ತರಾಗಲಿರುವ ಶಿಕ್ಷಣ ಸಂಯೋಜಕ ಚಂದ್ರಯ್ಯಶೆಟ್ಟಿಯವರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸನ್ಮಾನಿಸಿದರು.ದೊಡ್ಡಗದ್ದವಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಯ್ಯದ್ ಪಾಷಾ ಸ್ವಾಗತಿಸಿದರು. ಶಿಕ್ಷಕ ಶಶಿಧರ್ ಕಾರ್ಯಕ್ರಮ ನಿರೂಪಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry