ಮಂಗಳೂರು: ಕ್ರೀಡಾ ಭಾರತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳು ಜಂಟಿಯಾಗಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಕಿರಿಯರ ಒಲಿಂಪಿಕ್ಸ್ಗೆ ಸಂಸದ ನಳಿನ್ಕುಮಾರ್ ಕಟೀಲ್ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಿದರು. ಎರಡು ದಿನಗಳ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 3,750 ಮಕ್ಕಳು ಪಾಲ್ಗೊಳ್ಳುತ್ತಿದ್ದಾರೆ.

ಹತ್ತರಿಂದ 17 ವರ್ಷ ವಯಸ್ಸಿನ ಮಕ್ಕಳಿಗಾಗಿ ಆಯೋಜಿಸಿರುವ ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಹ್ಯಾಂಡ್ಬಾಲ್, ಬ್ಯಾಡ್ಮಿಂಟನ್, ಕಬಡ್ಡಿ, ಈಜು ಮತ್ತು ಕುಸ್ತಿ ಸ್ಪರ್ಧೆಗಳು ನಡೆಯಲಿವೆ. ಈ ಎಲ್ಲಾ ಸ್ಪರ್ಧೆಗಳಿಗೂ ಮಂಗಳಾ ಕ್ರೀಡಾಂಗಣದಲ್ಲಿ ಪ್ರತ್ಯೇಕ ಅಂಕಣಗಳನ್ನು ಸಿದ್ದಪಡಿಸಲಾಗಿದೆ. ಮಂಗಳೂರು ನಗರದ ಉತ್ತರ ಮತ್ತು ದಕ್ಷಿಣ ವಿಭಾಗಗಳು ಹಾಗೂ ಜಿಲ್ಲೆಯ ಉಳಿದ ಎಲ್ಲಾ ತಾಲ್ಲೂಕುಗಳ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ಲೇಡಿಹಿಲ್ ವೃತ್ತದಿಂದ ಆರಂಭವಾದ ಕ್ರೀಡಾಪಟುಗಳ ಪಥ ಸಂಚಲನ ಮಂಗಳಾ ಕ್ರೀಡಾಂಗಣವನ್ನು ಒಂದು ಸುತ್ತು ಹಾಕುವ ಮೂಲಕ ಕೊನೆಗೊಂಡಿತು. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಕಿರಿಯ ಕ್ರೀಡಾಪಟುಗಳು ಉರ್ವದ ಮಾರಿಯಮ್ಮ ದೇವಸ್ಥಾನದಿಂದ ತಂದ ಕ್ರೀಡಾ ಜ್ಯೋತಿಯನ್ನು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಜೆ.ಆರ್.ಲೋಬೊ ಅವರಿಗೆ ಹಸ್ತಾಂತರಿಸಿದರು. ಬಳಿಕ ಅದನ್ನು ಕ್ರೀಡಾಂಗಣದ ಅಗ್ಗಿಷ್ಟಿಕೆಯಲ್ಲಿ ವಿಲೀನಗೊಳಿಸಲಾಯಿತು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ನಳಿನ್ಕುಮಾರ್ ಕಟೀಲ್, ‘ದಕ್ಷಿಣ ಕನ್ನಡ ಜಿಲ್ಲೆಯು ದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಜಿಲ್ಲೆಗಳಲ್ಲಿ ಒಂದು. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿ ಗೆದ್ದ ಹಲವು ಕ್ರೀಡಾಪಟುಗಳು ಇಲ್ಲಿ ಇದ್ದಾರೆ.

ಒಲಿಂಪಿಕ್ ಕ್ರೀಡಾಕೂಟದಲ್ಲಿ ದೇಶದ ಸ್ಥಾನವನ್ನು ಎತ್ತರಕ್ಕೆ ಏರಿಸುವ ಉದ್ದೇಶದಿಂದ ಕ್ರೀಡಾ ಭಾರತಿ ಸಂಘಟನೆಯು ಕಿರಿಯರ ಒಲಿಂಪಿಕ್ ಆಯೋಜಿಸುತ್ತಿದೆ. ಹೊಸ ಕ್ರೀಡಾ ಪ್ರತಿಭೆಗಳನ್ನು ಶೋಧಿಸಲು ಈ ಕ್ರೀಡಾಕೂಟವು ನಾಂದಿಯಾಗಬೇಕು’ ಎಂದು ಅವರು ಹೇಳಿದರು.

ಜೆ.ಆರ್.ಲೋಬೊ ಮಾತನಾಡಿ, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಖಚಿತವಾಗಿ ಪದಕ ತಂದುಕೊಡಬಲ್ಲ ಕ್ರೀಡಾಪಟುಗಳನ್ನು ರೂಪಿಸುವ ಸವಾಲು ದೇಶದ ಮುಂದಿದೆ. ಸ್ಥಳೀಯವಾಗಿ ಆಯೋಜಿಸುವ ಇಂತಹ ಕ್ರೀಡಾಕೂಟಗಳು ಅದಕ್ಕೆ ಸಹಾಯಕವಾಗುತ್ತವೆ ಎಂದು ಹೇಳಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಮಾಜಿ ಸಂಸದೆ ತೇಜಸ್ವಿನಿ ಗೌಡ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕ್ರೀಡಾ ಭಾರತಿಯ ಕರ್ನಾಟಕ ಪ್ರಾಂತ ಸಂಯೋಜಕ ವಿ.ಮಂಜುನಾಥ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಂಘ ಚಾಲಕ ವಾಮನ ಶೆಣೈ, ಮಂಗಳೂರು ನಗರ ಸಂಘ ಚಾಲಕ ಡಾ.ಸತೀಶ್, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ,ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಕ್ರೀಡಾ ಭಾರತಿಯ ಮಂಗಳೂರು ವಿಭಾಗದ ಸಂಯೋಜಕ ಚಂದ್ರಶೇಖರ್ ರೈ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.