ಜಿಲ್ಲೆಗೆ ಇಂದು ಸಚಿವರ ದಂಡು

ಗುರುವಾರ , ಜೂಲೈ 18, 2019
28 °C

ಜಿಲ್ಲೆಗೆ ಇಂದು ಸಚಿವರ ದಂಡು

Published:
Updated:

ಬಳ್ಳಾರಿ: ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲೆಂದೇ   ಸಂವಿಧಾನದ 371ನೇ ತಿದ್ದುಪಡಿ ಅನುಷ್ಠಾನದ ಸಚಿವ ಸಂಪುಟದ ಉಪ ಸಮಿತಿಯು   ಇದೇ 3ರಂದು ಜಿಲ್ಲೆಯ ಹೊಸಪೇಟೆಯಲ್ಲಿನ ಅಮರಾವತಿ ಪ್ರವಾಸಿ ಮಂದಿರದ ಬಳಿಯ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ನಡೆಸಲಿರುವ ಸಭೆಗೆ ಹಾಜರಾಗಲು ಪ್ರಮುಖ ಸಚಿವರು ಆಗಮಿಸಲಿದ್ದಾರೆ.ಉಪಸಮಿತಿ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ, ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ,   ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ, ಪೌರಾಡಳಿತ, ಸಾರ್ವಜನಿಕ ಉದ್ಯಮಗಳು, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಖಮರುಲ್ ಇಸ್ಲಾಂ, ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry