ಜಿಲ್ಲೆಯಲ್ಲಿನ ಗಣಿ ಪ್ರದೇಶದ ಸಮೀಕ್ಷೆ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಜಿಲ್ಲೆಯಲ್ಲಿನ ಗಣಿ ಪ್ರದೇಶದ ಸಮೀಕ್ಷೆ

Published:
Updated:

ಚಿತ್ರದುರ್ಗ: ಜಿಲ್ಲೆಯಲ್ಲಿನ ಗಣಿ ಪ್ರದೇಶದ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.ಜಿಲ್ಲೆಯಲ್ಲಿನ ಹೊಳಲ್ಕೆರೆ, ಹೊಸದುರ್ಗ ಮತ್ತು ಚಿತ್ರದುರ್ಗ ತಾಲ್ಲೂಕುಗಳಲ್ಲಿನ ಗಣಿ ಪ್ರದೇಶಗಳಲ್ಲಿ ಸಮೀಕ್ಷೆ ಕಾರ್ಯವನ್ನು ಐದು ತಂಡಗಳು ಕೈಗೊಂಡಿವೆ.ಕಳೆದ ಎರಡು ದಿನಗಳಿಂದ ಈ ಸಮೀಕ್ಷೆ ಕಾರ್ಯ ಆರಂಭವಾಗಿದೆ. ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ತಂಡ ಮತ್ತು ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ಈ ಕಾರ್ಯದಲ್ಲಿ ತೊಡಗಿದೆ.ಬುಧವಾರ ಮತ್ತು ಗುರುವಾರ ಭೀಮಸಮುದ್ರ ಸುತ್ತಮುತ್ತ ಇರುವ ಸೆಸಾಗೋವಾ, ಬಿಬಿಎಚ್, ಜಾನ್, ನರಹರಿ ಮೈನ್ಸ್‌ಗಳ ಸಮೀಕ್ಷೆ ಕಾರ್ಯ ನಡೆಯಿತು.ಮುಖ್ಯವಾಗಿ ಈ ತಂಡಗಳು ಗಣಿಗಾರಿಕೆ ಪ್ರದೇಶದ ಗಡಿ ಗುರುತಿಸುವ ಕಾರ್ಯ ಮಾಡಲಿವೆ. ನಂತರ ಈ ಬಗ್ಗೆ ವರದಿಯನ್ನು ಸಿಇಸಿ ತಂಡಕ್ಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry