ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲಸಿದ್ಧತೆ

7

ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲಸಿದ್ಧತೆ

Published:
Updated:

ರಾಮನಗರ : ಜಿಲ್ಲೆಯಲ್ಲಿ ಕರ್ನಾಟಕ  ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ ತಿಳಿಸಿದರು.ನಗರಸಭೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ ಒಂದರಂದು ಆಚರಿಸಲಾಗುವ ರಾಜ್ಯೋತ್ಸವದ ಧ್ವಜಾರೋಹಣ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಿ.ಪಿ.ಯೋಗೇಶ್ವರ್ ಅವರನ್ನು ಆಹ್ವಾನಿಸಲಾಗುವುದು.ಜಿಲ್ಲೆಯಲ್ಲಿ ಸಾಹಿತ್ಯ, ಕಲೆ, ಸಾಂಸ್ಕೃತಿಕ, ಸಾಮಾಜಿ, ಪತ್ರಿಕೋದ್ಯಮ, ಸರ್ಕಾರಿ ಸೇವೆ ಸಲ್ಲಿಸಿರುವ ಆರು ಜನ ಗಣ್ಯರನ್ನು ಸನ್ಮಾನಿಸಲಾಗುವುದು. ಜಾನಪದ ಕಲಾವಿದರಿಂದ ಡೊಳ್ಳು ಕುಣಿತ, ವೀರಗಾಸೆ ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ  ವಿಜೃಂಭಣೆಯಿಂದ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ತಿಳಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸಿ.ಅರ್ಚನಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ವೆಂಕಟೇಶಪ್ಪ, ಅರಣ್ಯ ಉಪಸಂರಕ್ಷಣಾಧಿಕಾರಿ ಗೀತಾಂಜಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry