ಮಂಡ್ಯ: ಚುನಾವಣೆ ದಿನಾಂಕ ನಿಗದಿಯಾಗಿಲ್ಲ. ಆದರೂ, ಜಿಲ್ಲೆಯ ರಾಜಕಾರಣಿಗಳು ಚುನಾವಣೆಯ ಕನಸು ಕಾಣುತ್ತಿದ್ದಾರೆ. ಹಾಗಂತಲೇ ಕೆಲವರು ಚುನಾವಣೆ ಸ್ಪರ್ಧೆಯ ತಯಾರಿಯನ್ನೂ ಸದ್ದಿಲ್ಲದೇ ಆರಂಭಿಸಿದ್ದಾರೆ. ಜತೆಗೆ ಇವರಿಗೆ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರು ನೆನಪಾಗಿದ್ದಾರೆ!

ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಗೊಂದಲಗಳಿವೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರಾಜ್ಯ ರಾಜಕಾರಣಕ್ಕೆ ಮರಳಿರುವುದು ಜಿಲ್ಲೆಯಲ್ಲಿ ಹೊಸ ಉತ್ಸಾಹ ಮೂಡಿಸಿದ್ದರೆ, ಜೆಡಿಎಸ್ ಅಲ್ಲಲ್ಲಿ, ಪಕ್ಷದ ಕಚೇರಿಗಳನ್ನು ತೆಗೆಯುತ್ತಿದೆ. ಜಿಲ್ಲೆಯಲ್ಲಿ ಚಿಗುರುವ ಕನಸು ಕಾಣುತ್ತಿದ್ದ ಬಿಜೆಪಿಗೆ ಕೆಜೆಪಿಯ ಗುಮ್ಮ ಕಾಡುತ್ತಿದೆ. ಕ್ಷೇತ್ರದತ್ತ ಸುಳಿಯದ ನಾಯಕರೂ, ಈಗ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಮಾಡಲು ಆರಂಭಿಸಿದ್ದಾರೆ.

ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಈಗ ಮುಂಚೂಣಿಯಲ್ಲಿ ಇರುವವರು ಟಿಕೆಟ್ ಪಡೆಯುವ ಸಂದರ್ಭದಲ್ಲಿ ಹಿಂದೆ ಬೀಳಬಹುದು. ಕೊನೆ ಗಳಿಗೆಯಲ್ಲಿ ಸ್ಪರ್ಧೆಯಲ್ಲಿ ಇಲ್ಲದವರೇ ಕಣಕ್ಕೆ ಇಳಿಯಬಹುದು.

ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ಮೂರನೇ ಬಾರಿಗೆ ಆಯ್ಕೆಯಾಗಲು ಎಂ.ಶ್ರೀನಿವಾಸ್ ಸನ್ನದ್ಧರಾಗಿದ್ದಾರೆ. ಆದರೆ, ಮಾಜಿ ಸಚಿವ ದಿ.ಎಸ್.ಡಿ. ಜಯರಾಂ ಅವರ ಪುತ್ರ ಅಶೋಕ್ ಜಯರಾಂ ಕೂಡಾ ಜೆಡಿಎಸ್ನಿಂದ ಆಕಾಂಕ್ಷಿಯಾಗಿದ್ದಾರೆ.

ಇದು ಜೆಡಿಎಸ್ನಲ್ಲಿ ತಳಮಳಕ್ಕೆ ಕಾರಣವಾಗಿದೆ. ಕಾಂಗ್ರೆಸ್ನಿಂದ ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ, ಚಿತ್ರನಟ ಅಂಬರೀಷ್ ಹೆಸರು ಕೂಡಾ ಕೇಳಿ ಬರುತ್ತಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿದ್ದಾರೆ ರವಿಕುಮಾರ್ ಗಣಿಗ.

ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಎರಡನೇ ಬಾರಿಗೆ ಆಯ್ಕೆ ಬಯಸಿ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಜೆಡಿಎಸ್ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಕಳೆದ ಬಾರಿ ಇಲ್ಲಿಂದ ಸ್ಪರ್ಧಿಸಿ ಸೋತಿದ್ದ ಅಂಬರೀಷ್, ಈ ಬಾರಿಯೂ ಸ್ಪರ್ಧಿಸಲಿದ್ದಾರೆಯೇ ಎಂಬುದು ಪ್ರಶ್ನೆಯೂ ಹುಟ್ಟಿದೆ. ಕಳೆದ ಬಾರಿ ಕಾಂಗ್ರೆಸ್ನಿಂದ ಬಿ ಫಾರಂ ಪಡೆದು, ಕೊನೆಗಳಿಗೆಯಲ್ಲಿ ವಂಚಿತರಾಗಿದ್ದ ರವೀಂದ್ರ ಶ್ರೀಕಂಠಯ್ಯ ಈ ಬಾರಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ.

ಮೇಲುಕೋಟೆ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವಿಗಾಗಿ ಜೆಡಿಎಸ್ನಿಂದ ಸಿ.ಎಸ್. ಪುಟ್ಟರಾಜು ಸ್ಪರ್ಧಿಸಲಿದ್ದಾರೆ. ರೈತ ಸಂಘದ ಮುಖಂಡ, ಸರ್ವೋದಯ ಕರ್ನಾಟಕದಿಂದ ಕೆ.ಎಸ್. ಪುಟ್ಟಣ್ಣಯ್ಯ ಅವರೂ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ನಿಂದ ಸ್ಪರ್ಧಿಸುವುದಾಗಿ ಎಲ್.ಡಿ. ರವಿ ಅವರೇ ಖುದ್ದಾಗಿ ಘೋಷಿಸಿಕೊಂಡಿದ್ದಾರೆ.

ಕಾಂಗ್ರೆಸ್ನಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಳೆದ ಬಾರಿ ಪಕ್ಷೇತರರಾಗಿ ಮಳವಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಪಿ.ಎಂ. ನರೇಂದ್ರಸ್ವಾಮಿ ಅವರು, ಮರಳಿ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.

ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಳೆದ ಬಾರಿ ಸ್ಪರ್ಧಿಸಿದ್ದ ವೈ.ಎಸ್. ಸಿದ್ದರಾಜು ಸೇರಿದಂತೆ ಡಾ.ಮೂರ್ತಿ, ಮಾಜಿ ಶಾಸಕಿ ಮಲ್ಲಾಜಮ್ಮ ಮತ್ತಿತರರು ಆಕಾಂಕ್ಷಿಗಳಾದ್ದಾರೆ.

ಜೆಡಿಎಸ್ನಿಂದ ಡಾ.ಅನ್ನದಾನಿ, ಮುನಿರಾಜು ಆಕಾಂಕ್ಷಿಯಾಗಿದ್ದಾರೆ. ಮತ್ತೊಮ್ಮೆ ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಮಾಜಿ ಸಚಿವ ಬಿ. ಸೋಮಶೇಖರ್ ಅವರೂ ಪಕ್ಷದ ಕಚೇರಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ.

ಮದ್ದೂರಿನಿಂದ ಎರಡನೇ ಬಾರಿಗೆ ಆಯ್ಕೆಗಾಗಿ ಕಣಕ್ಕೆ ಇಳಿಯಲು ಶಾಸಕಿ ಕಲ್ಪನಾ ಸಿದ್ದರಾಜು ಬಯಸಿದ್ದಾರೆ. ಬಿಜೆಪಿಯಲ್ಲಿರುವ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಜೆಡಿಎಸ್ನತ್ತ ಮುಖ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ.

ತಮ್ಮಣ್ಣ ಅವರಿಗೆ ಮದ್ದೂರಿನಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಗಮನದಿಂದ ಗೊಂದಲಕ್ಕೆ ಈಡಾಗಿದ್ದಾರೆ. ರಾಜ್ಯ ರಾಜಕಾರಣಕ್ಕೆ ಮರಳಿರುವುದು ಈ ಕ್ಷೇತ್ರದ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಅವರು ಸ್ಪರ್ಧಿಸದಿದ್ದರೆ ಮಾತ್ರ ಬೇರೆಯವರಿಗೆ ಟಿಕೆಟ್ ಸಿಗಲಿದೆ.

ಕೆ.ಆರ್. ಪೇಟೆಯಿಂದ ಕೆ.ಬಿ. ಚಂದ್ರಶೇಖರ್ ಕಾಂಗ್ರೆಸ್ನಿಂದ ಕಣಕ್ಕೆ ಇಳಿಯಲು ಉತ್ಸುಕರಾಗಿದ್ದಾರೆ. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕಿಕ್ಕೇರಿ ಸುರೇಶ್ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ. ಜೆಡಿಎಸ್ನಿಂದ ಮಾಜಿ ಸ್ಪೀಕರ್ ಕೃಷ್ಣ, ಬಿ.ಎಲ್. ದೇವರಾಜು, ಬಿ. ಪ್ರಕಾಶ್, ಕೆ.ಸಿ. ನಾರಾಯಣಗೌಡ ಸೇರಿದಂತೆ ದೊಡ್ಡ ಪಟ್ಟಿಯೇ ಇದೆ.

ನಾಗಮಂಗಲ ಕ್ಷೇತ್ರದಿಂದ ಸುರೇಶ್ಗೌಡ ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಸಂಸದರಾಗಿರುವ ಎನ್. ಚಲುವರಾಯಸ್ವಾಮಿ ಈಗಾಗಲೇ ವಿಧಾನಸಭೆಗೆ ಇಲ್ಲಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಬಿಜೆಪಿಯಲ್ಲಿರುವ ಮಾಜಿ ಶಾಸಕ ಎಲ್.ಆರ್. ಶಿವರಾಮೇಗೌಡ ಅವರು, ಮರಳಿ ಕಾಂಗ್ರೆಸ್ನತ್ತ ನೋಟ ನೆಟ್ಟಿದ್ದಾರೆ. ಅವರಿಗೆ ಲೋಕಸಭೆ ಸ್ಪರ್ಧೆಗೆ ಅವಕಾಶ ನೀಡುವ ಮಾತುಗಳು ಕೇಳಿ ಬರುತ್ತಿವೆ. ಕಳೆದ ಬಾರಿ ವಿಧಾನಸಭೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಮುಖ ಅಭ್ಯರ್ಥಿಗಳು ಈ ಬಾರಿ ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ.

ಹೀಗಾಗಿ ಬಹುತೇಕ ಕಡೆ ಹೊಸ ಮುಖಗಳನ್ನು ಹುಡುಕಬೇಕಾಗಿದೆ. ಜತೆಗೆ ಕೆಜೆಪಿಯ ಚಟುವಟಿಕೆಗಳು ಆರಂಭಗೊಂಡಿರುವುದು ಅವರ ತಲೆನೋವನ್ನು ಮತ್ತಷ್ಟು ಹೆಚ್ಚಿಸಿದೆ.

ಅಂಬರೀಷ್ಗೆ ಯಾವ ಕ್ಷೇತ್ರ?
ಮಂಡ್ಯ: ಕೆಪಿಸಿಸಿ ಉಪಾಧ್ಯಕ್ಷ, ಚಿತ್ರನಟ ಅಂಬರೀಷ್ ಅವರಿಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಗೊಂದಲವಿದ್ದರೆ, ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ ಹಾಗೂ ಎಲ್.ಆರ್. ಶಿವರಾಮೇಗೌಡ ಅವರಿಗೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬ ಗೊಂದಲ ಕಾಡುತ್ತಿದೆ.

ಕಳೆದ ಬಾರಿ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಅಂಬರೀಷ್, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂಬುದರ ಜತೆಗೆ ಮಂಡ್ಯ ಅಥವಾ ಮದ್ದೂರು ಕ್ಷೇತ್ರದಿಂದಲೂ ಸ್ಪರ್ಧಿಸುತ್ತಾರೆ ಎಂಬ ಮಾತುಗಳಿವೆ.

ಜಿಲ್ಲೆಯ ಎಲ್ಲ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು, ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಅಂಬರೀಷ್ ಕ್ಷೇತ್ರದ ಗುಟ್ಟು ಬಿಟ್ಟುಕೊಡುತ್ತಿಲ್ಲ.

ಬಿಜೆಪಿಯಲ್ಲಿರುವ ಡಿ.ಸಿ. ತಮ್ಮಣ್ಣ ಹಾಗೂ ಎಲ್.ಆರ್. ಶಿವರಾಮೇಗೌಡ, ಆ ಪಕ್ಷದಿಂದ ಮಾನಸಿಕವಾಗಿ ಹೊರ ನಡೆದಿದ್ದಾರೆ. ಆದರೆ, ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬ ಗೊಂದಲ ಅವರನ್ನು ಕಾಡುತ್ತಿದೆ.
ಡಿ.ಸಿ. ತಮ್ಮಣ್ಣ ಅವರು ಜೆಡಿಎಸ್ನತ್ತ ಮುಖ ಮಾಡಿದ್ದಾರೆ ಎನ್ನುತ್ತಾರೆ ಅವರ ಬೆಂಬಲಿಗರು.

ಶಿವರಾಮೇಗೌಡ ಅವರು ಕಾಂಗ್ರೆಸ್ನತ್ತ ಮುಖ ಮಾಡಿದ್ದು, ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವ ಭರವಸೆ ಸಿಕ್ಕಿದೆ ಎನ್ನುತ್ತಾರೆ ಅವರ ಬೆಂಬಲಿಗರು.

ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು, ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಖಚಿತ ಎನ್ನುತ್ತಾರೆ ಅವರ ಬೆಂಬಲಿಗರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.