ಜಿಲ್ಲೆಯಲ್ಲಿ ಸಾಧಾರಣ ಮಳೆ

7

ಜಿಲ್ಲೆಯಲ್ಲಿ ಸಾಧಾರಣ ಮಳೆ

Published:
Updated:
ಜಿಲ್ಲೆಯಲ್ಲಿ ಸಾಧಾರಣ ಮಳೆ

ಮಡಿಕೇರಿ: ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದ್ದು, ನಗರವು ಸೇರಿದಂತೆ ಇತರೆಡೆ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. 



ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.50ಮಿ.ಮೀ. ಮಳೆ ದಾಖಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 2.60ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 0.42ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ 1.47ಮಿ.ಮೀ. ಸರಾಸರಿ ಮಳೆಯಾಗಿದೆ.



ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಸಂಪಾಜೆ 4, ಭಾಗಮಂಡಲ 5,   ಶ್ರೀಮಂಗಲ 2, ಶನಿವಾರಸಂತೆ 4, ಶಾಂತಳ್ಳಿ 4.20ಮಿ.ಮೀ. ಮಳೆಯಾಗಿದೆ.



ಹಾರಂಗಿ ಜಲಾಶಯದ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2827.29ಅಡಿಗಳು. ನೀರಿನ ಒಳ ಹರಿವು 409ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 8032 ಕ್ಯೂಸೆಕ್ ಆಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry