ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆ, ಗುಡ್ಡಗಾಡು ಪ್ರದೇಶದಲ್ಲಿ ಕಾಲುಸಂಕ, ತೂಗು ಸೇತುವೆ, ಕಾರವಾರ ತಲಪ್ಪಾಡಿ ಮೀನುಗಾರಿಕೆ ರಸ್ತೆ ನಿರ್ಮಾಣ, ಜಿಲ್ಲೆಯ ಮೂರು ಸಾವಿರ ಬಡವರ ಮನೆಗಳಿಗೆ ಸೌರವಿದ್ಯುತ್ ಆಧುನಿಕ ಮೀನುಮಾರುಕಟ್ಟೆ ನಿರ್ಮಾಣ, ಮೀನುಗಾರರ ಅಭಿವೃದ್ಧಿ, ಅಂಗನವಾಡಿ ಕೇಂದ್ರ, ಗ್ರಾಮಚಾವಡಿ ಅಭಿವೃದ್ಧಿ ಕುರಿತಂತೆ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ ತಿಳಿಸಿದರು.

ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರಾವಳಿ ಪ್ರದೇಶದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುವುದು. ಆಧುನಿಕ ಎಲ್ಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ 10 ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂ.10 ಕೋಟಿ ಅನುದಾನ ಒದಗಿಸಿವೆ ಎಂದರು.

ಉತ್ತರ ಕನ್ನಡ ಜಿಲ್ಲೆಯ ಶಿರಾಲಿ, ಅಂಕೋಲಾ ಹಾಗೂ ಕಾರವಾರದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಿಸಲಾಗುವುದು. ಜಿಲ್ಲೆಯ ಅರಣ್ಯ ಗುಡ್ಡಗಾಡು ತಾಲ್ಲೂಕುಗಳಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಲು ಸಂಕಗಳನ್ನು ನಿರ್ಮಿಸಲಾಗುವುದು. ಕಾರವಾರ ಮಾಜಾಳಿಯಿಂದ ತಲಪ್ಪಾಡಿ ಮೀನುಗಾರಿಕೆ ರಸ್ತೆ ನಿರ್ಮಾಣ ಆರಂಭಗೊಂಡಿದೆ. ಅರಣ್ಯ ಪ್ರದೇಶದಲ್ಲಿ ಕತ್ತಲೆಯಲ್ಲಿ ವಾಸಿಸುವ 3 ಸಾವಿರ ಕುಟುಂಬಗಳಿಗೆ ಸೋಲಾರ ವಿದ್ಯುತ್ ದೀಪದ ಸೌಲಭ್ಯ ಕಲ್ಪಿಸಲಾಗುವುದು ಎಂದು ನಾಗರಾಜ ಶೆಟ್ಟಿ ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಹಳಿಯಾಳ ಶಾಸಕ ಸುನಿಲ ಹೆಗಡೆ ಮಾತನಾಡಿ ಜೋಯಿಡಾ ತಾಲ್ಲೂಕಿನ ಬಹುತೇಕ ಭಾಗವು ಅಭಯಾರಣ್ಯ ಹಾಗೂ ಹುಲಿ ಯೋಜನೆ ವ್ಯಾಪ್ತಿಗೊಳಪಡುತ್ತದೆ. ಇಲ್ಲಿ ಅರಣ್ಯ ಗ್ರಾಮಗಳಲ್ಲಿ ಯಾವುದೇ ಅಭಿವೃದ್ಧಿ ಕೈಗೊಳ್ಳಲು ಅರಣ್ಯ ಇಲಾಖೆ ಪರವಾನಿಗೆ ನೀಡುವುದಿಲ್ಲ. ಕಾಳಿ ಹಿನ್ನೀರಿನಲ್ಲಿ ಮೀನುಗಾರಿಕೆಗೆ ಪರವಾನಿಗೆ ಇಲ್ಲ. ರಾಜ್ಯದ ಅನೇಕ ಕಡೆಗಳಲ್ಲಿ ಹಿನ್ನೀರು ಮೀನುಗಾರಿಕೆಗೆ ಅವಕಾಶ ನೀಡಿದಂತೆ ಕಾಳಿ ಹಿನ್ನೀರಿನಲ್ಲೂ ಮೀನುಗಾರಿಕೆಗೆ ಅವಕಾಶ ನೀಡಬೇಕು ಎಂದರು.ಶಾಸಕರಾದ ದಿನಕರ ಶೆಟ್ಟಿ, ಜೆ.ಡಿ.ನಾಯ್ಕ, ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಜಿ.ಪಂ. ಸಿಇಓ ವಿಜಯ ಮೋಹನ ರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.