ಬುಧವಾರ, ಮೇ 25, 2022
30 °C

ಜಿಲ್ಲೆಯಲ್ಲಿ 2462 ಕ್ಷಯ ರೋಗಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ 2003ರಿಂದ ಡಿಸೆಂಬರ್ 2010ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ 25032 ಕ್ಷಯರೋಗಿಗಳನ್ನು ಪತ್ತೆ ಹಚ್ಚಲಾಗಿದೆ. ಇವರಲ್ಲಿ 16822 ರೋಗಿಗಳಿಗೆ ಡಾಟ್ಸ್ ಚಿಕಿತ್ಸೆ ನೀಡಲಾಗಿದ್ದು, ಇವರೆಲ್ಲ ರೋಗದಿಂದ ಗುಣಮುಖರಾಗಿದ್ದಾರೆ. ಉಳಿದ 2462 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಹೇಳಿದರು.ನಗರದ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯ ವಿಭಾಗ, ಮಹಿಳಾ ಮತ್ತು ಮಕ್ಕಳ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಗ್ಲೋಬಲ್ ಫಂಡ್‌ರೌಂಡ್ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯಲ್ಲಿ 2009ರಲ್ಲಿ ಟಿಬಿ- ಎಚ್‌ಐವಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. 2010ರಲ್ಲಿ 3660 ಕ್ಷಯರೋಗಿಗಳಲ್ಲಿ 3087 ರೋಗಿಗಳನ್ನು ಎಚ್‌ಐವಿ ಪರೀಕ್ಷೆಗೆ ಒಳಪಡಿಸಲಾಗಿದೆ. 465 ಕ್ಷಯರೋಗಿಗಳಿಗೆ ಎಚ್‌ಐವಿ ಇದೆ. ಇದರಲ್ಲಿ 177 ರೋಗಿಗಳಿಗೆ ಎಆರ್‌ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ವಿಶ್ವದ ಕ್ಷಯರೋಗಿಗಳಲ್ಲಿ ಐದನೇ ಒಂದು ಭಾಗದಷ್ಟು ರೋಗಿಗಳು ಭಾರತದಲ್ಲಿದ್ದಾರೆ. ದೇಶದಲ್ಲಿ ಪ್ರತಿದಿನ 40 ಸಾವಿರಕ್ಕಿಂತ ಹೆಚ್ಚು ಜನರು ರೋಗಕ್ಕೆ ತುತ್ತಾಗುತ್ತಿದ್ದಾರೆ. ಪ್ರತಿವರ್ಷ 1 ಸಾವಿರಕ್ಕೂ ಹೆಚ್ಚು ರೋಗಿಗಳು ಮರಣ ಹೊಂದುತ್ತಿದ್ದಾರೆ ಎಂದರು.ಜಿ.ಪಂ. ಉಪಾಧ್ಯಕ್ಷೆ ಲಲಿತಮ್ಮ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅಸ್ಮಾತಬಸ್ಸುಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೆನ್ನಮಲ್ಲಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರತಾಪ್‌ಸೂರ್ಯ, ಡಾ.ಸಿ.ಜಯರಾಮರಾವ್, ಪ್ರೊ. ಶರತ್ ಕುಮಾರ್, ಪ್ರೊ.ಜಯಶ್ರೀ, ಡಾ.ರಮೇಶ್, ಡಾ.ರಂಗಸ್ವಾಮಿ, ಎಸ್.ಸಿ.ಎ.ಕರಡಿ ಮುಂತಾದವರು ಭಾಗವಹಿಸಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಗುರುಸಿದ್ದಯ್ಯ ನಿರೂಪಿಸಿದರು. ಉಪ ಆರೋಗ್ಯ ಶಿಕ್ಷಣಾಧಿಕಾರಿ ಶಿವಕುಮಾರ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.