ಬುಧವಾರ, ಏಪ್ರಿಲ್ 14, 2021
28 °C

ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಡೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ರಾಧಾಸುಂದರೇಶ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತೆಯರು ಶುಕ್ರವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ತಾಲ್ಲೂಕು ಕಚೇರಿಗೆ ತೆರಳಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ  ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಧಾ ಸುಂದರೇಶ್ ಮಾತನಾಡಿದರು. ತಾಲ್ಲೂಕು ಅಧ್ಯಕ್ಷೆ ಮಂಜುಳಾ ಮಾತನಾಡಿ, ಬೇಡಿಕೆ ಈಡೇರಿಸಬೇಕೆಂದು ಅನೇಕ ಬಾರಿ ಪ್ರತಿಭಟಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಇನ್ನೂ ಮುಂದೆ ಬೇಡಿಕೆ ಈಡೇರದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟಿಸಲಿ ರುವುದಾಗಿ ಕರೆ ನೀಡಿದರು.ತಾಲ್ಲೂಕು ಕಾರ್ಯದರ್ಶಿ ಎಚ್.ಎಸ್.ಅನುಸೂಯ , ಪಾರ್ವತಿ, ಮೀನಾಕ್ಷಿ, ಜಯಮ್ಮ, ಲಲಿತಮ್ಮ ಹಾಗೂ ನೂರಾರು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.`ಮಂತ್ರಿ ಸ್ಥಾನಕ್ಕೆ ಮಾತ್ರ ಪೈಪೋಟಿ~

ಮೂಡಿಗೆರೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಬಿ.ಕೆ. ಲಕ್ಷ್ಮಣ್ ಕುಮಾರ್ ಒತ್ತಾಯಿಸಿದರು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಸಹಯೋಗದಲ್ಲಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ಭಾರತೀಯ ಕಮ್ಯುನಿಷ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ರೇಣುಕಾರಾಧ್ಯ ಮಾತನಾಡಿ, ವಿಧಾನ ಸಭೆಯಲ್ಲಿ ಸಚಿವ ಸ್ಥಾನ ಪಡೆಯುವುದಕ್ಕಾಗಿ ಪ್ರತಿಭಟನೆ ನಡೆಸುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದರು.

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂಭಾಗದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಬೇಲೂರು ರಸ್ತೆಯ ಮೂಲಕ ಸಾಗಿ ತಾಲ್ಲೂಕು ಕಚೇರಿಯಲ್ಲಿ ಸಮಾವೇಶಗೊಂಡಿತು. ಪ್ರತಿಭಟನೆಯ ನಂತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ನೀಡಲಾಯಿತು.

 

ಪ್ರತಿಭಟನೆಯಲ್ಲಿ ಕಮ್ಯುನಿಸ್ಟ್ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಗೋಪಾಲ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯ ಲಕ್ಷ್ಮಣಾಚಾರ್, ರವಿ ಸುಂಕಸಾಲೆ ಮಾತನಾಡಿದರು. ಅಂಗನವಾಡಿ ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಬಲ್ಕೀಸ್ ಭಾನು, ಅನುಸೂಯ, ವನಜಾಕ್ಷಿ, ಎಂ.ಪಿ. ಮೀನಾಕ್ಷಿ ಇದ್ದರು.ನರಸಿಂಹರಾಜಪುರ: ತಹಶೀಲ್ದಾರ್‌ಗೆ ಮನವಿ

ನರಸಿಂಹರಾಜಪುರ: 
ರಾಜ್ಯ ಅಂಗನವಾಡಿ ಕಾರ್ಯಕರ್ತೆ ಯರು ಮತ್ತು ಸಹಾಯಕಿಯರು ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಜೆ.ಕೃಷ್ಣಮೂರ್ತಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಎಐಟಿಯುಸಿಯ ರಾಜ್ಯ ಸಮಿತಿಯ ಗಾಯತ್ರಿ, ಜಿಲ್ಲಾ ಸಮಿತಿಯ ಪದ್ಮಾವತಿ,ತಾಲ್ಲೂಕು ಅಧ್ಯಕ್ಷೆ ಸಂಧ್ಯಾರಾಣಿ, ಕಾರ್ಯದರ್ಶಿ ಅನುಸೂಯ ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.   

ಜಿಲ್ಲಾಧಿಕಾರಿಗೆ ಮನವಿ ಪತ್ರ

ಚಿಕ್ಕಮಗಳೂರು:
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ನಡೆಯಿತು. ನಗರದ ಹನುಮಂತಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ವೆುರವಣಿಗೆ ನಡೆಸಿದ ನೂರಾರು ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್ ಅವರಿಗೆ ಸಲ್ಲಿಸಿದರು. 

ಫೆಡರೇಷನ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಧಾ ಸುಂದರೇಶ್, ಮುಖಂಡರಾದ ಪುಷ್ಪ ಬಸವರಾಜ್, ಮಂಗಳ, ಉದಯ ಕುಮಾರಿ, ವಸಂತ, ನಾಗಮ್ಮ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಅಮ್ಜದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.ತರೀಕೆರೆ: ಪ್ರತಿಭಟನಾ ಮೆರವಣಿಗೆ

ತರೀಕೆರೆ:
ವಿವಿಧ ಬೇಡಿಕೆಯನ್ನು  ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು  ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯಲ್ಲಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಯರನ್ನುದ್ದೇಶಿಸಿ ಕಾಟಗನೆರೆ ವಿಜಯಕುಮಾರಿ ಮಾತನಾಡಿದರು.   ಇಲ್ಲಿನ ಸಾರಿಗೆ ಸಂಸ್ಥೆಯ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಮಿನಿ ವಿಧಾನಸೌಧದ ಮುಂದೆ ಕೆಲಕಾಲ ಧರಣಿ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಗಾಯತ್ರಿ, ನಳಿನಾ ಮತ್ತು ಎನ್.ಸರೋಜ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.