ಚಿಕ್ಕಬಳ್ಳಾಪುರ: `ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಪ್ರಮಾಣ ಹೆಚ್ಚಿಸಲು ಮತ್ತು ಅರಣ್ಯೀಕರಣದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಕಡಿಮೆ ದರದಲ್ಲಿ ಸಸಿಗಳನ್ನು ವಿತರಿಸಲಾಗುತ್ತಿದೆ. ಅರಣ್ಯ ಪ್ರದೇಶವನ್ನು ವಿಸ್ತರಿಸಲಾಗುತ್ತಿದೆ' ಎಂದು ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ನಾಗೇಶ್ ತಿಳಿಸಿದರು.

ಪರಿಸರ ಸಮತೋಲನ ಕಾಯ್ದುಕೊಳ್ಳಲು ಜಿಲ್ಲೆಯಲ್ಲಿ ಶೇ 33ರಷ್ಟು ಅರಣ್ಯ ಪ್ರದೇಶ ಇರಬೇಕು. ಆದರೆ ನಮ್ಮ ಜಿಲ್ಲೆಯಲ್ಲಿ ಶೇ 8 ರಿಂದ 12ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ. ಅರಣ್ಯ ಪ್ರದೇಶವನ್ನು ವಿಸ್ತರಿಸಲು ಮತ್ತು ಹಸಿರು ವಾತಾವರಣ ಕಾಯ್ದುಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇಡೀ ಜಿಲ್ಲೆಯಲ್ಲಿ ಸುಮಾರು 49 ಸಾವಿರ ಹೆಕ್ಟೇರ್ನಷ್ಟು ಕಾಯ್ದಿಟ್ಟ ಅರಣ್ಯ ಪ್ರದೇಶವಿದ್ದು, ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿ ತಾಲ್ಲೂಕುಗಳಲ್ಲಿ ಅರಣ್ಯ ಪ್ರದೇಶ ವ್ಯಾಪಕವಾಗಿದೆ. ಈಗ ಲಭ್ಯವಿರುವ ಅರಣ್ಯ ಪ್ರದೇಶವನ್ನು ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಕೋರುತ್ತಿದ್ದೇವೆ ಎಂದು ಅವರು ಹೇಳಿದರು.

ಅರಣ್ಯೀಕರಣ ಪ್ರಕ್ರಿಯೆಗೆ ಆದ್ಯತೆ ನೀಡಲೆಂದೇ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ರೈತರು, ಸಾರ್ವಜನಿಕರು ಮತ್ತು ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಈ ಯೋಜನೆಯಲ್ಲಿ ಭಾಗಿಯಾಗಬಹುದು. ಅರಣ್ಯ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಸಿಗಳನ್ನು ಪಡೆದು, ಜಮೀನಿನಲ್ಲಿ ನೆಟ್ಟು ಪೋಷಿಸಿದಲ್ಲಿ ಇಂತಿಷ್ಟು ಸಸ್ಯಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಅವರು ಹೇಳಿದರು.

ಪ್ರತಿ ವರ್ಷ ಸುಮಾರು ಒಂದು ಕೋಟಿಯಷ್ಟು ಸಸಿಗಳನ್ನು ರೈತರಿಗೆ ಮತ್ತು ಸಾರ್ವಜನಿಕರಿಗೆ ವಿತರಿಸುವ ಗುರಿ ಹೊಂದಿದ್ದು, ಆಸಕ್ತರು ಎಷ್ಟು ಬೇಕಾದರೂ ಸಸಿಗಳನ್ನು ಕೊಳ್ಳಬಹುದು. ಸಸಿಗಳನ್ನು ಸಮೀಪದ ಇಲಾಖಾ ನರ್ಸರಿಯಿಂದ, ವಿತರಣಾ ಕೇಂದ್ರಗಳಿಂದ ಪಡೆಯಬಹುದು. ಅಲ್ಲದೇ ಆಯ್ದ ಗ್ರಾಮಪಂಚಾಯಿತಿ ಮತ್ತು ಗ್ರಾಮ ಅರಣ್ಯ ಸಮಿತಿಗಳ ಮೂಲಕವೂ ಪಡೆಯಬಹುದು ಎಂದು ಅವರು ತಿಳಿಸಿದರು.

ಪ್ರತಿ ಸಸಿಗೆ ವರ್ಷಾಂತ್ಯದಲ್ಲಿ 10 ರೂಪಾಯಿ, ಎರಡನೇ ವರ್ಷಾಂತ್ಯದಲ್ಲಿ 15 ರೂಪಾಯಿ ಮತ್ತು ಮೂರನೇ ವರ್ಷಾಂತ್ಯದಲ್ಲಿ 20 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ಒಂದು ಹೆಕ್ಟೇರ್ನಲ್ಲಿ 400 ಸಸಿಗಳನ್ನು ನೆಟ್ಟು ಪೋಷಿಸಿದಲ್ಲಿಯೂ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಬೆಟ್ಟದ ಬಳಿ ದೇವಿವನ ನಿರ್ಮಿಸಲಾಗಿದ್ದು, ಅರಣ್ಯಪ್ರದೇಶವನ್ನು ನೈಸರ್ಗಿಕವಾಗಿ ಬೆಳೆಸಲಾಗುತ್ತಿದೆ. ಇತರ ತಾಲ್ಲೂಕುಗಳಲ್ಲೂ ಇದೇ ಮಾದರಿಯಲ್ಲಿ ದೇವಿವನ ನಿರ್ಮಿಸುವ ಉದ್ದೇಶವಿದೆ. ಒಂದೊಂದು ದೇವಿವನ ನಿರ್ಮಾಣಕ್ಕೆ 40 ಲಕ್ಷ ರೂಪಾಯಿ ವೆಚ್ಚವಾಗುತ್ತದೆ. ಚಿಕ್ಕಬಳ್ಳಾಪುರದ ಸೊಲಾಲಪ್ಪನದಿನ್ನೆ ಬಳಿ ವೃಕ್ಷಗಳ ಉದ್ಯಾನ ಹಾಗೂ ವನ ವಿಜ್ಞಾನ ಕೇಂದ್ರ ಪುನರಾರಂಭಿಸುವ ಉದ್ದೇಶವಿದೆ ಎಂದು ಅವರು ಹೇಳಿದರು. ವಲಯ ಅರಣ್ಯಾಧಿಕಾರಿ ಮರಿಲಿಂಗೇಗೌಡ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.