ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಪ್ರವಾಸ

ಬುಧವಾರ, ಜೂಲೈ 24, 2019
24 °C

ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಪ್ರವಾಸ

Published:
Updated:

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಡಾ. ಎನ್.ಮಂಜುಳಾ ಅವರು ಇದೇ ತಿಂಗಳ 15ರವರೆಗೆ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 3ರಂದು ಮಧ್ಯಾಹ್ನ ಮುನಿಸಿಪಲ್ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ನಂತರ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.ಜೂನ್ 4ರಂದು ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ನಡೆಯುವ ಜಿಲ್ಲಾ ಆಸ್ಪತ್ರೆ ಮತ್ತು ಉದ್ಯೋಗ ಮೇಳ ಕುರಿತ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೂನ್ 6ರಂದು ಮಧ್ಯಾಹ್ನ ನ್ಯಾಯಾಲಯ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.ಜೂನ್ 7ರಂದು ಚಿಕ್ಕಬಳ್ಳಾಪುರ ತಾಲೂಕ್ಲು ಕಛೇರಿಗೆ ಭೇಟಿ ನೀಡಲಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಜನನ ಮರಣ ನೋಂದಣಿ ವರದಿಯನ್ನು ಪರಿಶೀಲಿಸಲಿದ್ದಾರೆ, ಜೂನ್ 8ರಂದು  ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಲಿದ್ದಾರೆ. ಅಂದು ಮಧ್ಯಾಹ್ನ ನ್ಯಾಯಾಲಯ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುತ್ತಾರೆ.ಜೂನ್ 9ರಂದು ಗೌರಿಬಿದನೂರು ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ತಾಲ್ಲೂಕು ಕಛೇರಿಗೆ ಭೇಟಿ ನೀಡಲಿದ್ದಾರೆ. ಜೂನ್ 10ರಂದು ಮಧ್ಯಾಹ್ನ ಮುನಿಸಿಪಲ್ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.ಜೂನ್ 14ರಂದು ಚಿಕ್ಕಬಳ್ಳಾಪುರ ತಾಲ್ಲೂಕಿನ ಕಾಕಲಚಿಂತೆ, ಗಂಡಿಗಾನಹಳ್ಳಿ, ಚೀಟಗೇನಹಳ್ಳಿ, ರಾಮಪಟ್ಟಣ, ತಿಮ್ಮನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry