ಶನಿವಾರ, ಮೇ 21, 2022
25 °C

ಜಿಲ್ಲೆಯಾದ್ಯಂತ ಜೈಲ್‌ಭರೋ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೇಂದ್ರ ಸರ್ಕಾರದ ಆರ್ಥಿಕ ನೀತಿ ಹಾಗೂ ರಾಜಕೀಯ ನಿರ್ಧಾರ ವಿರೋಧಿಸಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ಬಿಪಿ ಕಾರ್ಯಕರ್ತರು ಜೈಲ್‌ಭರೋ ಚಳವಳಿ ನಡೆಸಿದರು. ರಸ್ತೆತಡೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.ಕಾರ್ಯಕರ್ತರ ಬಂಧನ

ಕುಣಿಗಲ್:
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆತಡೆ ಚಳವಳಿ ನಡೆಸಲು ಮುಂದಾದ ಬಿಜೆಪಿ ಕಾರ್ಯಕರ್ತರು ಬಂಧನಕ್ಕೊಳಗಾದ ಘಟನೆ ಶುಕ್ರವಾರ ನಡೆದಿದೆ. ಗ್ರಾಮ ದೇವತೆ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಕಾರ್ಯಕರ್ತರು ಹುಚ್ಚಮಾಸ್ತಿಗೌಡ ವೃತ್ತದ ಬಳಿ ಸಭೆ ನಡೆಸಿದರು.ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕರಾಮಣ್ಣ, ಮುಖಂಡರಾದ ಡಿ.ಕೃಷ್ಣಕುಮಾರ್ ಮಾತನಾಡಿದರು.   ಎಚ್.ಎನ್.ನಟರಾಜ್, ನಡೆಮಾವಿನಪುರ ರಂಗಸ್ವಾಮಿ, ತಿಮ್ಮೇಗೌಡ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಗೌರಮ್ಮ ಪ್ರಧಾನ ಕಾರ್ಯದರ್ಶಿ ಶಶಿಕಲ, ರೂಪಾ ಮತ್ತಿತರರು ಉಪಸ್ಥಿತರಿದ್ದರು.ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ತಿಪಟೂರು:
ಶಾಸಕ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ನೆರೆದ ಬಿಜೆಪಿ ಕಾರ್ಯಕರ್ತರು, ಸುಮಾರು 2 ಗಂಟೆಗೂ ಹೆಚ್ಚು ಕಾಲ ರಸ್ತೆತಡೆ ನಡೆಸಿದರು.ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಕ್ಷಣ ಬೆಲೆ ಏರಿಕೆ ನಿಯಂತ್ರಿಸಬೇಕೆಂದು ಒತ್ತಾಯಿಸಿದರು.

ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆಗೆ ಕಡಿವಾಣವೇ ಬಿದ್ದಿಲ್ಲ. ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಯೇ ಇದಕ್ಕೆಲ್ಲಾ ಕಾರಣ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ಬೆಲೆ ನಿಯಂತ್ರಿಸಿದ್ದರು ಎಂದು ನೆನಪಿಸಿಕೊಂಡರು.ರಸ್ತೆ ತಡೆ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಿಭಟನನಿರತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ಶಿವಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ನಾಗರಾಜು, ನಗರಸಭೆ ಅಧ್ಯಕ್ಷೆ ಸರಸ್ವತಿ, ಸದಸ್ಯರಾದ ಸಿಂಗ್ರಿದತ್ತ ಪ್ರಸಾದ್, ರಾಮಮೋಹನ್, ರಮೇಶ್‌ಬಾಬು, ಶಂಕರಪ್ಪ, ಎಪಿಎಂಸಿ ನಿರ್ದೇಶಕರಾದ ಬಿ.ಬಿ.ಸಿದ್ದಲಿಂಗಮೂರ್ತಿ, ಪ್ರಕಾಶ್, ಶ್ರೀನಿವಾಸ್, ಮುಖಂಡರಾದ ಆಯರಹಳ್ಳಿ ಶಂಕರಪ್ಪ, ಗಂಗರಾಜು, ಶ್ರೀಕಂಠಮೂರ್ತಿ, ಜಗದೀಶ್ ಮತ್ತಿತರರು ಇದ್ದರು.ಕಪ್ಪುಹಣ ನಿಗ್ರಹಕ್ಕೆ ಆಗ್ರಹ

ಪಾವಗಡ:
ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿ ಖಂಡಿಸಿ ಬಳ್ಳಾರಿ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ ಬಿಜೆಪಿ ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.`ಜೈಲ್‌ಭರೋ~ ಚಳವಳಿಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ವಿಶ್ವನಾಥ್, ಇಂಧನ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ಬಂದರೆ ದೇಶದ ಆರ್ಥಿಕತೆ ಸರಿದೂಗಿಸಬಹುದು ಎಂದು ಅಭಿಪ್ರಾಯಪಟ್ಟರು.ಮುಖಂಡರಾದ ರವಿ, ಪ್ರಭಾಕರ್, ನಾರಾಯಣಪ್ಪ, ವಿಜಯೇಂದ್ರರಾವ್, ವೆಟರ್ನರಿ ಉಗ್ರಪ್ಪ, ಪುರೊಷೋತ್ತಮರೆಡ್ಡಿ, ವಿ.ವೆಂಕಟೇಶ್, ಮಂಜುನಾಥ್, ಈಶ್ವರಪ್ಪ, ಜ್ಯೋತಿ, ಪರಸಮ್ಮ ಅವರನ್ನು ಪೊಲೀಸರು ಬಂಧಿಸಿದರು.ಜೈಲ್‌ಭರೋ: 36 ಬಂಧನ

ಚಿಕ್ಕನಾಯಕನಹಳ್ಳಿ:
ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರೋಧಿಸಿ ಬಿಜೆಪಿ ಕರೆ ನೀಡಿದ್ದ ಜೈಲ್‌ಬರೋ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಕೆ.ಎಸ್.ಕಿರಣ್‌ಕುಮಾರ್ ಸೇರಿದಂತೆ 36 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿದರು.

 

ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸುಮಾರು ಅರ್ಧಗಂಟೆ ಕಾಲ ರಸ್ತೆ ತಡೆ ನಡೆಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ಸೀತಾರಾಮಯ್ಯ, ಮುಖಂಡರಾದ ಕೆಂಕೆರೆ ನವೀನ್, ಎಂ.ಎಂ.ಜಗದೀಶ್, ಶ್ರೀನಿವಾಸಮೂರ್ತಿ, ಎಂ.ಎಸ್.ರವಿಕುಮಾರ್, ಕವಿತಾ, ಜಯಲಕ್ಷ್ಮಿ, ಹಳೆಮನೆ ಸುರೇಶ್, ಅನಂತಯ್ಯ, ಬೇವಿನಹಳ್ಳಿ ಚನ್ನಬಸಪ್ಪ, ಶರತ್‌ಕುಮಾರ್, ಆರ್.ಬಿ.ಚಂದ್ರಶೇಖರ್, ನಾಗಭೂಷಣ್, ಬರಗೂರು ಬಸವರಾಜು, ಹನುಮಂತಪ್ಪ, ಕೆ.ಎನ್.ರಂಗಸ್ವಾಮಿ ಉಪಸ್ಥಿತರಿದ್ದರು.ಬಿಜೆಪಿ ಮುಖಂಡರ ಬಂಧನ

ಮಧುಗಿರಿ:
ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ ತಾಲ್ಲೂಕು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತುಮಕೂರು ಗೇಟ್ ಬಳಿ ಬಂಧಿಸಿದರು.ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಪಾಂಡುರಂಗಾರೆಡ್ಡಿ,  ಮುಖಂಡರಾದ ಮಲ್ಲಿಕಾರ್ಜುನಯ್ಯ, ವಿ.ಪದ್ಮಣ್ಣ, ಕಂಬದರಂಗಪ್ಪ, ರುದ್ರೇಶ್,  ಸೀತಾರಾಂ, ಎಂ.ವಿ.ಮೂಡ್ಲಗಿರೀಶ್, ಸುರೇಶ್, ಬಿ.ಪಿ.ನಾರಾಯಣ್, ಶ್ರೀನಿವಾಸಮೂರ್ತಿ, ಅನಂತಕೃಷ್ಣರಾಜು, ಬಸವರಾಜು ಮುಂಚೂಣಿಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.