ಮಡಿಕೇರಿ: ಕೊಡಗಿನಾದ್ಯಂತ ಗುರುವಾರ ತುಂತುರು ಮಳೆಯಾಗಿದೆ. ಮಡಿಕೇರಿಯಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಆಗಾಗ ತುಂತುರು ಮಳೆ ಸುರಿಯುತ್ತಿತ್ತು.

ಜಿಲ್ಲೆಯ ಮಳೆ ವಿವರ: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ 8.30ಕ್ಕೆ ಅಂತ್ಯಗೊಂಡಂತೆ 24 ಗಂಟೆಯ ಅವಧಿಯಲ್ಲಿ 1.27 ಮಿ.ಮೀ. ಸರಾಸರಿ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 228.62 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 3.10 ಮಿ.ಮೀ. ಮಳೆ ದಾಖಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ 313.99 ಮಿ.ಮೀ. ಮಳೆಯಾಗಿದೆ. ವೀರಾಜಪೇಟೆ ತಾಲ್ಲೂಕಿನಲ್ಲಿ 0.70 ಮಿ.ಮೀ. ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಮಡಿಕೇರಿ ಕಸಬಾ 0.40 ಮಿ.ಮೀ., ನಾಪೋಕ್ಲು 0.40 ಮಿ.ಮೀ., ಸಂಪಾಜೆ 4 ಮಿ.ಮೀ., ಭಾಗಮಂಡಲ 7.60 ಮಿ.ಮೀ., ವೀರಾಜಪೇಟೆ ಕಸಬಾ 4.20 ಮಿ.ಮೀ. ಮಳೆ ಆಗಿದೆ. ಹಾರಂಗಿ ಜಲಾಶಯದ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2801.14 ಅಡಿಗಳು, ಕಳೆದ ವರ್ಷ ಇದೇ ದಿನ 2805.81 ಅಡಿ ನೀರಿತ್ತು.
ಇಂದಿನ ನೀರಿನ ಒಳ ಹರಿವು 90.00 ಕ್ಯೂಸೆಕ್ ಆಗಿದೆ. ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 15.00 ಕ್ಯೂಸೆಕ್ ಆಗಿತ್ತು.

ಚರಂಡಿ ದುರಸ್ತಿಗೆ ಆಗ್ರಹ
ಮಡಿಕೇರಿ: ಮಡಿಕೇರಿ- ಸಂಪಾಜೆಯ ರಾಜ್ಯ ಹೆದ್ದಾರಿ ರಸ್ತೆ ಬದಿಯ ಚರಂಡಿ ಮುಚ್ಚಿ ಹೋಗಿದ್ದು, ದುರಸ್ತಿಗೊಳಿಸುವಂತೆ ತಾಳತ್ತಮನೆಯ ನೇತಾಜಿ ಯುವಕ ಮಂಡಲದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಇತ್ತೀಚೆಗೆ ನಿರ್ಮಾಣವಾದ ರಸ್ತೆ ಬದಿಯಲ್ಲಿ ಚರಂಡಿಗಳು ಮುಚ್ಚಿ ಹೋಗಿವೆ. ಇದರಿಂದ ಮಳೆಯ ನೀರು ರಸ್ತೆಯಲ್ಲಿ ಹರಿದು, ರಸ್ತೆ ಹಾಳಾಗುವ ಸಂಭವಿದೆ. ಈ ಹಿನ್ನೆಲೆಯಲ್ಲಿ ರಸ್ತೆ ನಿರ್ಮಿಸಿದ ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಹೆದ್ದಾರಿ ಪ್ರಾಧಿಕಾರದವರು ಈ ಚರಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.