ಮಂಗಳವಾರ, ಏಪ್ರಿಲ್ 13, 2021
28 °C

ಜಿಲ್ಲೆಯಾದ್ಯಂತ ಬ್ಯಾಂಕ್ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ ತರುವುದು ಮತ್ತು ಖಂಡೇಲ್‌ವಾಲ್ ಸಮಿತಿ ಶಿಫಾರಸು ಜಾರಿಗೆ ವಿರೋಧಿಸಿ ಭಾರತೀಯ ಬ್ಯಾಂಕುಗಳ ಒಕ್ಕೂಟ (ಐಬಿಎ) ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ಬೆಂಬಲ ವ್ಯಕ್ತಪಡಿಸಿ ಜಿಲ್ಲೆಯಲ್ಲಿನ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ ಬಂದ್ ಆಚರಿಸಿದರು.ಸರ್ಕಾರಿ ಸ್ವಾಮ್ಯದ ಬಹುತೇಕ ಎಲ್ಲ ಬ್ಯಾಂಕುಗಳು ಬಂದ್ ಆಚರಿಸಿದ ಕಾರಣ ದೈನಂದಿನ ವಹಿವಾಟಿಗೆ ವ್ಯತ್ಯಯ ಉಂಟಾಯಿತು. ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಇತರ ಬ್ಯಾಂಕುಗಳು ಕಾರ್ಯನಿರ್ವಹಿಸಿದ ಕಾರಣ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಯಿತು.ಗ್ರಾಹಕರಿಗೆ ಚೆಕ್, ಹಣ ಜಮೆ ಮಾಡಲಾಗಲಿಲ್ಲ. ಡಿಮಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಕೂಡ ಸಾಧ್ಯವಾಗಲಿಲ್ಲ. ಎಟಿಎಂ ಯಂತ್ರಗಳಲ್ಲಿ ಭರ್ತಿ ಮಾಡಲಾಗಿದ್ದ ಹಣವೂ ಖಾಲಿಯಾಗಿದ್ದು, ಸಾರ್ವಜನಿಕರು ಪರದಾಡಬೇಕಾಯಿತು.`1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ದೇಶೀಯ ಬ್ಯಾಂಕಿಂಗ್ ವಲಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್‌ಡಿಐ) ಅವಕಾಶ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಇದರ ಪರಿಣಾಮ ಬಹುರಾಷ್ಟ್ರೀಯ ಬ್ಯಾಂಕುಗಳು ದೇಶದ ಖಾಸಗಿ ಬ್ಯಾಂಕುಗಳನ್ನು ಸ್ವಾಧೀನಪಡಿಸಿಕೊಳ್ಳುವುದಲ್ಲದೆ ಬ್ಯಾಂಕಿಂಗ್ ಉದ್ಯಮಕ್ಕೆ ಧಕ್ಕೆ ಉಂಟು ಮಾಡುತ್ತವೆ. ಸರ್ಕಾರದ ಈ ಚಿಂತನೆಗೆ ಕಡಿವಾಣ ಹಾಕದಿದ್ದರೆ ಪರಿಹಾರ ಕಾಣದಂತಹ ಸಮಸ್ಯೆಗಳು ಉದ್ಭವಿಸಲಿವೆ~ ಎಂದು ಬ್ಯಾಂಕ್ ನೌಕರರು ಆರೋಪಿಸಿದರು.`ಗ್ರಾಮೀಣ ಬ್ಯಾಂಕುಗಳ ಶಾಖೆಗಳನ್ನು ಮುಚ್ಚಿ ಸರ್ಕಾರವು ಬ್ಯಾಂಕ್ ತೆರೆಯಲು ಕಾರ್ಪೊರೇಟ್ ಕಂಪೆನಿಗಳಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಹೊರಗುತ್ತಿಗೆ ಪದ್ಧತಿ ಜಾರಿಗೆ ಬರುವುದರಿಂದ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಗೆ ಉದ್ಯೋಗ ಅಭದ್ರತೆ ಕಾಡಲಿದೆ. ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿದೆ~ ಎಂದು ಬ್ಯಾಂಕ್ ನೌಕರರು `ಪ್ರಜಾವಾಣಿ~ಗೆ ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.