ಶುಕ್ರವಾರ, ಏಪ್ರಿಲ್ 16, 2021
21 °C

ಜಿಲ್ಲೆಯಾದ್ಯಂತ ಸಂಭ್ರಮದ ಸ್ವಾತಂತ್ರ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನೆಹರು ಮೈದಾನದಲ್ಲಿ ಬುಧವಾರ ಮುಂಜಾನೆ `ಜೈ ಹೋ~ ಗೀತೆಯ ಸದ್ದಾಗುತ್ತಿದ್ದಂತೆ ಒಕ್ಕೊರಲಿನ ಜೈಕಾರ ಮೊಳಗಿತು. ತ್ಯಾಗ- ಬಲಿ ದಾನದ ಮೂಲಕ ದಕ್ಕಿದ ಸ್ವಾತಂತ್ರ್ಯ ವನ್ನು ತಮ್ಮ ನೃತ್ಯ- ರೂಪಕಗಳ ಮೂಲಕ ಕಟ್ಟಿಕೊಡುವ ಪ್ರಯತ್ನವನ್ನು ವಿವಿಧ ಶಾಲೆಗಳ ಮಕ್ಕಳು ಮಾಡಿದರು. ಈ ಮೂಲಕ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಹುಬ್ಬಳ್ಳಿ ತಾಲ್ಲೂಕು ಸ್ವಾತಂತ್ರ್ಯೋತ್ಸ ವ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಯಶ್ರೀ ಶಿಂತ್ರಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಹಿರಿಯರ ತ್ಯಾಗ, ಬಲಿದಾನದಿಂದ ಈ ಸ್ವಾತಂತ್ರ್ಯ ದೊರೆತಿದೆ. ನಂತರದಲ್ಲಿ ದೇಶ ಆರ್ಥಿಕ, ಸಾಮಾಜಿಕ ಹಾಗೂ ವೈಜ್ಞಾನಿಕವಾಗಿ ಮಹತ್ತರ ಸಾಧನೆ ಮಾಡುತ್ತಿದೆ ಎಂದರು.ಸತ್ಯ-ಅಹಿಂಸೆ ತತ್ವವನ್ನು ಅಳವಡಿಸಿ ಕೊಂಡು ಪ್ರತಿಯೊಬ್ಬರು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎದುರಿಸಲು ನಾವೆಲ್ಲ ದೃಢ ಸಂಕಲ್ಪ ಮಾಡಬೇಕು ಎಂದರು.ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆ ಯಾಗಿತ್ತು.  ಕ್ಯಾಪಟೋನಿಯಾದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು `ಹೇ ದಿವ್ಯ ಚೇತನಾ~ ಭರತನಾಟ್ಯ ಪ್ರದರ್ಶಿಸಿದರು. ಜಿಹ್ವೇಶ್ವರ ಶಾಲೆಯ ವಿದ್ಯಾರ್ಥಿನಿಯರು ಜೈಹೋ ಹಾಡಿಗೆ ಸೊಗಸಾಗಿ ನರ್ತಿಸಿದರು.ಅಶೋಕ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು `ಹೇ ವತನ್~ ರೂಪಕದ ಮೂಲಕ ಸ್ವಾತಂತ್ರ್ಯದ ಹಿಂದಿನ ತ್ಯಾಗ, ಬಲಿದಾನಗಳ ಮಹತ್ವ ಸಾರಿದರು. ಇದಲ್ಲದೆ ಘಂಟಿಕೇರಿ ಸರ್ಕಾರಿ ಶಾಲೆ, ಗಣೇಶಪೇಟೆ ಹಿರಿಯ ಪ್ರಾಥಮಿಕ ಶಾಲೆ, ಜೇಂಟ್ಸ್ ಶಾಲೆಗಳ ವಿದ್ಯಾರ್ಥಿ ಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.ಇದಕ್ಕೂ ಮುನ್ನ ಪೊಲೀಸ್, ಎನ್‌ಸಿಸಿ ಹಾಗೂ ವಿವಿಧ ಶಾಲಾ ತಂಡ ಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಇಪ್ಪತ್ತಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.ತಹಶೀಲ್ದಾರ್ ಅವರು ನಗರ ಸಶಸ್ತ್ರ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಸಿ.ಎ. ದೊಡ್ಡಮನಿ ಅವರಿಂದ ಗೌರವ ರಕ್ಷೆ ಸ್ವೀಕರಿಸಿದರು.ಶಾಸಕರಾದ ವೀರಭದ್ರಪ್ಪ ಹಾಲಹರವಿ, ಮೋಹನ ಲಿಂಬಿಕಾಯಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಕಾಟವೆ, ಮೇಯರ್ ಪಾಂಡುರಂಗ ಪಾಟೀಲ, ಪಾಲಿಕೆ ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.ಈದ್ಗಾಮೈದಾನದಲ್ಲಿಧ್ವಜಾರೋಹಣ

ನಗರದ ಈದ್ಗಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ ಧ್ವಜಾರೋಹಣ ನೆರವೇರಿಸಿದರು.`ಇಂದು ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮಾಚರಣೆಯ ಜೊತೆಗೆ ನಮ್ಮ ಸಾಧನೆಯನ್ನು ವಿಮರ್ಶೆ ಮಾಡಿಕೊಳ್ಳುವ ಸಂದರ್ಭವೂ ಹೌದು. ನಮ್ಮ ಹಿರಿಯರ ತ್ಯಾಗ-ಬಲಿದಾನದಿಂದ ಈ ಫಲ ಸಿಕ್ಕಿದ್ದು, ನಾವೆಲ್ಲ ಅದನ್ನು ಹೇಗೆ ಸದುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ~ ಎಂದು ಸಂದೇಶ ನೀಡಿದರು.ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ. ಜಾಗತಿಕ ಮಟ್ಟದ ಸೌಲಭ್ಯ ನೀಡಲು ಪಾಲಿಕೆ ಬದ್ಧವಾಗಿದ್ದು, ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.ಮೇಯರ್ ಪಾಂಡುರಂಗ ಪಾಟೀಲ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಕಾಟವೆ, ಶಾಸಕ ವೀರಭದ್ರಪ್ಪ ಹಾಲಹರವಿ, ಪಾಲಿಕೆ ಸದಸ್ಯರಾದವೀರಣ್ಣ ಸವಡಿ, ರಾಘವೇಂದ್ರ ರಾಮದುರ್ಗ, ಸುಧೀರ ಸರಾಫ, ಡಿ.ಕೆ. ಚೌಹಾಣ, ರಾಜಣ್ಣ ಕೊರವಿ, ಎಸಿಪಿ ಎ.ಆ ಬಡಿಗೇರ ಇತರರು ಪಾಲ್ಗೊಂಡಿದ್ದರು.ಪಾಲಿಕೆ ಕಚೇರಿಯಲ್ಲಿ ಧ್ವಜಾರೋಹಣ

ಮಹಾನಗರಪಾಲಿಕೆ ಕಚೇರಿ ಮುಂಭಾಗದಲ್ಲಿ ಮೇಯರ್ ಪಾಂಡುರಂಗ ಪಾಟೀಲ ಧ್ವಜಾರೋಹಣ ನೆರವೇರಿಸಿದರು.`ಸ್ವಾತಂತ್ರ್ಯ ಕೊಟ್ಟವರಿಗೆ ನಾವು ಯಾವ ಸೌಲಭ್ಯಗಳನ್ನೂ ಕಲ್ಪಿಸಿಲ್ಲ. ಮತ್ತೊಂದೆಡೆ, ನಮ್ಮವರೇ ನಮ್ಮ ವ್ಯವಸ್ಥೆಯನ್ನು ಅಪಹಾಸ್ಯ ಮಾಡುವಂತಹ ಪರಿಸ್ಥಿತಿ ಇದೆ.

 

ಇಂತಹ ಹೊತ್ತಿನಲ್ಲಿ ನಮ್ಮನ್ನು ನಾವು ಪರಾಮರ್ಶಿಸಿಕೊಳ್ಳುವ ಅಗತ್ಯವಿದೆ~ ಎಂದು ಅವರು ಅಭಿಪ್ರಾಯಪಟ್ಟರು. ಮುಂಬರುವ ದಿನದಲ್ಲಿ ಭಾರತವು ಇಡೀ ಪ್ರಪಂಚವನ್ನೇ ಆಳುವ ಶಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಯುವಕರು ಶ್ರಮಿಸಬೇಕಿದೆ ಎಂದರು.ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ, ವಿಶೇಷ ಅಧಿಕಾರಿ ಎಸ್.ಎಚ್. ನರೇಗಲ್, ವಿರೋಧ ಪಕ್ಷದ ನಾಯಕ ದಶರಥ ವಾಲಿ, ಪಾಲಿಕೆ ಸದಸ್ಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.    

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.