ಮಂಗಳವಾರ, ನವೆಂಬರ್ 12, 2019
28 °C
ವಿಧಾನಸಭೆ ಚುನಾವಣೆ

ಜಿಲ್ಲೆಯಾದ್ಯಂತ 133 ನಾಮಪತ್ರ

Published:
Updated:

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ನಾಮಪತ್ರ ಸಲ್ಲಿಕೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು ಐದು ವಿಧಾನಸಭಾ ಕ್ಷೇತ್ರಗಳಿಂದ 133 ನಾಮಪತ್ರಗಳು ಸಲ್ಲಿಕೆಯಾಗಿವೆ. ಅವರಲ್ಲಿ 63 ಮಂದಿ ಪಕ್ಷೇತರರಾಗಿ ಕಣಕ್ಕೆ ಇಳಿದಿರುವುದು ವಿಶೇಷ.ಕಳೆದ ಬಾರಿ ವಿವಿಧ ಪಕ್ಷಗಳಿಂದ ಸ್ಪರ್ಧಿಸಿದವರು ಈ ಬಾರಿ ಪಕ್ಷೇತರರಾಗಿ ಸಲ್ಲಿಸಿದ್ದರೆ, ಇನ್ನೂ ಕೆಲವರು ನೂತನ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದಾರೆ.ನಾಮಪತ್ರ ಸಲ್ಲಿಸುವ ಕೊನೆಯ ದಿನದವರೆಗೆ ವಿವಿಧ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದು ವಿಳಂಬವಾದ ಕಾರಣ ಯಾರ‌್ಯಾರು ನಾಮಪತ್ರಗಳನ್ನು ಸಲ್ಲಿಸುತ್ತಾರೆ ಮತ್ತು ಯಾರು ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ವಿವಿಧ ಪಕ್ಷಗಳಿಂದ ಟಿಕೆಟ್ ಸಿಗದ ಕಾರಣದಿಂದಲೂ ಕೆಲ ಆಕಾಂಕ್ಷಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಕಣದಲ್ಲಿ ಇಳಿದಿದ್ದಾರೆ.ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಎಲ್ಲ ಐದು ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದು, ನೂತನ ಪಕ್ಷಗಳಾದ ಬಿಎಸ್‌ಆರ್ ಕಾಂಗ್ರೆಸ್ ಮತ್ತು ಕೆಜೆಪಿ ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಕೆಲ ಕ್ಷೇತ್ರಗಳಲ್ಲಿ ತ್ರಿಕೋನ ಪೈಪೋಟಿ ಸಾಧ್ಯತೆ ಕಂಡು ಬಂದರೆ, ಇನ್ನೂ ಕೆಲ ಕಡೆ ಇಬ್ಬರು ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ.ಚುನಾವಣೆ ಅಧಿಕಾರಿಗಳಿಂದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಏಪ್ರಿಲ್ 20ರಂದು ನಾಮಪತ್ರಗಳನ್ನು ಹಿಂಪಡೆಯಲು ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸಿದವರಲ್ಲಿ ಎಷ್ಟು ಮಂದಿ ಕಣದಲ್ಲಿ ಇರುತ್ತಾರೆ ಮತ್ತು ಎಷ್ಟು ಮಂದಿ ನಿರ್ಗಮಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಪ್ರತಿಕ್ರಿಯಿಸಿ (+)