ಶುಕ್ರವಾರ, ಏಪ್ರಿಲ್ 16, 2021
29 °C

ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಶ್ರಮಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಹೇಳಿದರು. ಅವರು 57ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗುರುವಾರ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.



ನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ಹೀಗಾಗಿ ಜಿಲ್ಲೆಯ  ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಇದೇ ರೀತಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸ್ತರದ ಜನರ ಪ್ರಯತ್ನ ಬೇಕು ಎಂದರು.



ಕರ್ನಾಟಕದ ಏಕೀಕರಣಕ್ಕೆ ಶ್ರಮಿಸಿದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದೂ ಹೇಳಿದರು.

ಶಾಸಕ ಸಂಗಣ್ಣ ಕರಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ್  ಭಾಗವಹಿಸಿದ್ದರು.



ರಾಜ್ಯೋತ್ಸವದ ಅಂಗವಾಗಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ ನಡೆಯಿತು. ಮಳೆಯ ನಡುವೆಯೇ  ತಹಶೀಲ್ದಾರರ ಕಚೇರಿ ಆವರಣದಿಂದ ಹೊರಟ ಮೆರವಣಿಗೆ ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿ ಬಂದಿತು.  ವಿವಿಧ ಇಲಾಖೆಗಳು ರೂಪಿಸಿದ್ದ ಅಭಿವೃದ್ಧಿಪರ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಡೊಳ್ಳು ಕುಣಿತ ಮೆರವಣಿಗೆಗೆ ಮೆರುಗು ತಂದಿದ್ದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.