ಭಾನುವಾರ, ಏಪ್ರಿಲ್ 11, 2021
29 °C

ಜಿಲ್ಲೆಯ ವಿವಿಧೆಡೆ ಮಕ್ಕಳ ಆರೋಗ್ಯ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಿಲ್ಲೆಯ ವಿವಿಧೆಡೆ ಮಕ್ಕಳ ಆರೋಗ್ಯ ತಪಾಸಣೆ

ಬೇಲೂರು: `ಇಲ್ಲಿನ ಸರ್ಕಾರಿ ಆಸ್ಪತ್ರೆಯನ್ನು ಸರ್ಕಾರ 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಕಟ್ಟಡ ನಿರ್ಮಾಣಕ್ಕೆ 3.35 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಮಿತ್‌ಕುಮಾರ್ ಶೆಟ್ಟಿ ಹೇಳಿದರು.ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ದ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದ ಉದ್ಘಾಟನಾ ಸಮಾ ರಂಭದಲ್ಲಿ ಅವರು ಮಾತನಾಡಿದರು.ಬೇಲೂರು ಸರ್ಕಾರಿ ಆಸ್ಪತ್ರೆ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿದೆ. ಸರ್ಕಾರ ಆದ್ಯತೆಯ ಮೇರೆಗೆ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದೇ ರೀತಿ 2.25 ಕೋಟಿ ರೂ. ವೆಚ್ಚದಲ್ಲಿ ಅರೇಹಳ್ಳಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಖರ್ಚು ಮಾಡಲಾಗುತ್ತಿದೆ. ಮಾಸಿಕ 50 ಸಾವಿರ ಸಂಬಳ ನೀಡುವುದಾಗಿ ಹೇಳಿದರೂ ಸರ್ಕಾರಿ ಆಸ್ಪತ್ರೆಗೆ ವೈದ್ಯರು ಬರುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸದ ವೈದ್ಯರಿಗೆ ಒಂದು ಲಕ್ಷ ದಂಡ ವಿಧಿಸುವ ಸರ್ಕಾರದ ನಿರ್ಧಾರ ಸರಿಯಾಗಿಲ್ಲ. ಈ ಕಾರ್ಯಕ್ರಮದ ಬಗ್ಗೆ ಶಿಕ್ಷಕರಿಗೆ ತಿಳಿವಳಿಕೆ ನೀಡುವ ಅಗತ್ಯವಿದೆ ಎಂದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಡಿ. ಚಂದ್ರೇಗೌಡ ಮಾತನಾಡಿ, ಮಕ್ಕಳಿಗೆ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕೆಂಬ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಮನವರಿಕೆ ಮಾಡಿಕೊಡಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಸುಂದರೇಶ್ ಮಾತ ನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಟಿ. ಇಂದಿರಾ, ಬಿ. ಜಯಶೀಲ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಮಲ ಚನ್ನಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಸಂದ್ಯಾ,ಬಿ.ಆರ್.ಸಿ. ನಾರಾಯಣ್, ದೈಹಿಕ ಪರಿವೀಕ್ಷಕ ರಂಗಸ್ವಾಮಿ, ಅಕ್ಷರ ದಾಸೋಹದ ಹೇಮಂತ್‌ಕುಮಾರ್, ಉಪಪ್ರಾಂಶುಪಾಲ ಮರಿಯಪ್ಪ ಇದ್ದರು.`ಕಲಿಕೆಗೆ ಆರೋಗ್ಯ ಮುಖ್ಯ~

ಚನ್ನರಾಯಪಟ್ಟಣ: ಮಕ್ಕಳ ಮಾನಸಿಕ, ದೈಹಿಕ ಸ್ಥಿತಿ ಸಧೃಡವಾಗಿದ್ದರೆ ಕಲಿಕೆ ಉತ್ತಮ ವಾಗಿರುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ನಿಂಗರಾಜಪ್ಪ ಬುಧವಾರ ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಆಶ್ರಯದಲ್ಲಿ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಡಿ ಒಂದರಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ `ಆರೋಗ್ಯ ತಪಾಸಣಾ ಕಾರ್ಯಕ್ರಮ~ವನ್ನು ಉದ್ಘಾಟಿಸಿ ಅವರು ಮಾತನಾಡಿದರು.ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಸ್. ಮಲ್ಲೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಡೆಂಗೆ ಇತರೆ ಸಾಂಕ್ರಾಮಿಕ ರೋಗಗಳು ತಡೆಯುವಲ್ಲಿ ಆರೋಗ್ಯ ಇಲಾಖೆ ವಿಫಲ ವಾಗಿದೆ. ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಹಲವಾರು ಸಲ ಆರೋಗ್ಯಾಧಿ ಕಾರಿಗಳ ಗಮನಕ್ಕೆ ತಂದರೂ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ದೂರಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು ಮಾತನಾಡಿ, ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 1-10ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿ ರುವ 38,164 ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಂಗಮ್ಮ ರಾಮಕೃಷ್ಣೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ಕುಸುಮ ಬಾಲಕೃಷ್ಣ, ಪುರಸಭೆಯ ಮಾಜಿ ಅಧ್ಯಕ್ಷೆ ಅನಸೂಯ ಪ್ರಕಾಶ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಕೀರ್ತಿ ನಾರಾಯಣ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಮಾತನಾ ಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕಾಳೇಗೌಡ, ಶಿಕ್ಷಣ ಸಂಯೋಜಕ ದೇವರಾಜೇ ಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಆರ್. ಹಿರಣ್ಣಯ್ಯ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಎ.ಆರ್. ಧನಶೇಖರ್, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ನಾಗೇಶ್ ಇದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಸಿ.ಎಂ. ಸಿದ್ದಲಿಂಗಸ್ವಾಮಿ ಸ್ವಾಗತಿಸಿದರೆ, ಸಹ ಶಿಕ್ಷಕ ಶಿವಣ್ಣ ವಂದಿಸಿದರು.`ಉತ್ತಮ ಯೋಜನೆ~

ಹೊಳೆನರಸೀಪುರ: ಸರ್ಕಾರ ಜಾರಿಗೆ ತಂದಿರುವ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಶಾಲಾ ಮಕ್ಕಳಿಗೆ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದೆ. ಇದರಡಿ ಮಕ್ಕಳ ಆರೋಗ್ಯ ತಪಾಸಣೆಗೊಳಪಡಿಸಿ ಅಗತ್ಯ ಇರುವ ಮಕ್ಕಳಿಗೆ ಅತ್ಯುತ್ತಮ ಚಿಕಿತ್ಸೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊಡಿಸಲಾಗುತ್ತದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ರಾಜೇಶ್ ತಿಳಿಸಿದರು.ಬಾಲಕಿಯರ ಪದವಿ ಪೂರ್ವ ಸರ್ಕಾರಿ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸುವರ್ಣ ಆರೋಗ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಮಾತನಾಡಿ, ಈ ಯೋಜನೆಯಲ್ಲಿ ಆನಾರೋಗ್ಯ ದಿಂದ ನರಳುವ ಮಕ್ಕಳು ಅತ್ಯುತ್ತಮ ಚಿಕಿತ್ಸೆ ಪಡೆಯಬಹುದು. ಮಕ್ಕಳನ್ನು ತಪಾಸಣೆ ನಡೆಸಿದ ವೈದ್ಯರು ನೀಡುವ ಆರೋಗ್ಯ ಮಾಹಿತಿ ಕಾರ್ಡ್ ಜೋಪಾನವಾಗಿ ಇಟ್ಟುಕೊಳ್ಳ ಬೇಕೆಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎನ್. ದೇವೇಗೌಡ ಮಾತನಾಡಿ, ಶಿಕ್ಷಕರು ಎಲ್ಲ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಇರುವವರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಅಗತ್ಯ ಇರುವವರಿಗೆ ಹೆಚ್ಚಿನ ಚಿಕಿತ್ಸೆ ದೊರಕಿಸಿ ಕೊಡಿ ಎಂದು ಸಲಹೆ ನೀಡಿದರು. ಪುರಸ ಭಾಧ್ಯಕ್ಷೆ ವಿನೋದಾ, ಬಿ.ಆರ್.ಸಿ. ಕುಮಾರ್, ಉಪ ಪ್ರಾಂಶುಪಾಲ ನಂಜೇಗೌಡ ಇದ್ದರು. ಶಿಕ್ಷಕ ಉಮೇಶ್ ನಿರೂಪಿಸಿದರು.`ಮಕ್ಕಳ ಆರೋಗ್ಯದ ಮಾಹಿತಿ ನೀಡಿ~


ಹಿರೀಸಾವೆ: ಮಕ್ಕಳ ನ್ಯೂನತೆ ಬಗ್ಗೆ ಶಿಕ್ಷಕರು, ಪೋಷಕರು ವೈದ್ಯರಿಗೆ ಮಾಹಿತಿ ನೀಡಿದರೆ ಉತ್ತಮ ಚಿಕಿತ್ಸೆ ನೀಡಲು ಸಾಧ್ಯ ಎಂದು ಸಮು ದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್‌ಕುಮಾರ್ ಬುಧವಾರ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಏರ್ಪಡಿಸಿದ್ದ  `ಮಕ್ಕಳ ತಪಾಸಣಾ~ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತಾಲ್ಲೂಕು ಶಿಕ್ಷಕರ ಸಂಘದ ನಿರ್ದೇಶಕ ಮಂಜೇಗೌಡ ಮಾತನಾಡಿದರು. ಸಿಆರ್‌ಸಿ ಪ್ರಸನ್ನ ಕಾರ್ಯಕ್ರಮದ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್. ಶ್ರೀಧರ್, ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಎಸ್. ರವಿಕುಮಾರ್, ಗ್ರಾಮ ಪಂಚಾ ಯಿತಿ ಮಾಜಿ ಅಧ್ಯಕ್ಷ ಎಚ್.ಜಿ. ಮಂಜುನಾಥ್, ಎಸ್‌ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಸದಸ್ಯರು ಕಾರ್ಯಕ್ರಮದಲ್ಲಿದ್ದರು.ಮುಖ್ಯ ಶಿಕ್ಷಕ ಜಯಣ್ಣ ಸ್ವಾಗತಿಸಿ, ಸಹ ಶಿಕ್ಷಕ ಕೇಶವೇಗೌಡ ವಂದಿಸಿದರು. ಇಂದಿನಿಂದ ಹೋಬಳಿಯ ಎಲ್ಲ ಶಾಲೆಗಳಲ್ಲಿ ಸುವರ್ಣ ಆರೋಗ್ಯ ಚೈತನ್ಯ ಯೋಜನೆಯಲ್ಲಿ ವೈದ್ಯರು ಒಂದರಿಂದ ಹತ್ತನೇ ತರಗತಿ ವರೆಗಿನ ಮಕ್ಕಳನ್ನು ತಪಾಸಣೆ ಮಾಡಲ್ಲಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದರು.`ಮಕ್ಕಳ ಆರೋಗ್ಯದ ಕಾಳಜಿ ಮುಖ್ಯ~

ಜಾವಗಲ್: ಮಕ್ಕಳ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡ  ಬೇಕು. ಪ್ರತಿ ಮಗುವನ್ನು ಆರೋಗ್ಯ ತಪಾಸಣೆಗೆ ಒಳ ಪಡಿಸುವಂತೆ ಶಿಕ್ಷಕರು ಜವಾಬ್ದಾರಿ ವಹಿಸಬೇಕು ಎಂದು ತಾಲ್ಲೂಕು ಪಂಚಾಯತಿ ಸದಸ್ಯೆ ಲಕ್ಷ್ಮಿರವಿಶಂಕರ್ ಹೇಳಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬುಧವಾರ ನಡೆದ  ಸುವರ್ಣ ಆರೋಗ್ಯ ಚೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಗ್ರಾಮ ಪಂಚಾಯತಿ ಅಧ್ಯಕ್ಷ ಜೆ.ಡಿ. ಧನಂಜಯ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ ಆರೋಗ್ಯವಂತರನ್ನಾಗಿ ಮಾಡುವುದು ಕಾರ್ಯ ಕ್ರಮದ ಉದ್ದೇಶ ಎಂದರು.ಪ್ರಾಥಮಿಕ ಆರೋಗ್ಯಾಧಿಕಾರಿ ಡಾ. ಗೀತಾ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರುದ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಪುಟ್ಟಶಂಕರ್ ರಾಮಲಿಂಗಪ್ಪ, ಸುರಕೋಡ್, ಚಂದ್ರೇಗೌಡ, ಶಿವಲಿಂಗಮೂರ್ತಿ, ಮರುಳ ಸಿದ್ದಪ್ಪ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.