ಜಿಲ್ಲೆಯ ವಿವಿಧೆಡೆ ಮಳೆ: ರೈತರ ಸಂತಸ

7
ಪ್ರಜಾವಾಣಿ ವಾರ್ತೆ

ಜಿಲ್ಲೆಯ ವಿವಿಧೆಡೆ ಮಳೆ: ರೈತರ ಸಂತಸ

Published:
Updated:

ಮಂಡ್ಯ: ಮಂಡ್ಯವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಮಳೆಯಾಗಿದೆ. ನಗರದಲ್ಲಿ ಸಂಜೆ 4 ಗಂಟೆಯ ಸುಮಾರಿಗೆ ಆರಂಭವಾದ ಮಳೆಯೂ ಎರಡು ಗಂಟೆಗೂ ಹೆಚ್ಚು ಕಾಲ ಮಳೆ ಬಂದಿತು.ವಿ.ವಿ. ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ನೀರು ಜಾಸ್ತಿ ಇದ್ದದ್ದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಕಚೇರಿಗಳಿಂದ ಮನೆಗೆ ತೆರಳುವವರೂ ಪರದಾಡಬೇಕಾಯಿತು. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ ಉತ್ತಮ ಮಳೆಯಾ ಗಿರುವುದು ರೈತರಲ್ಲಿ ಸಂತಸ ಉಂಟು ಮಾಡಿದೆ.ಮಳೆ: ವಿದ್ಯುತ್ ವ್ಯತ್ಯಯ

ಮಳವಳ್ಳಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಇದರಿಂದ ಪಟ್ಟಣದಲ್ಲಿ ದಿನಪೂರ್ತಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸಾರ್ವಜನಿಕರು ಪರದಾಡುವಂತಾಗಿದೆ.ಕೆಲವು ದಿನಗಳಿಂದ ಹಗಲು ವೇಳೆಯೆ ಹೆಚ್ಚಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಒಮ್ಮಮ್ಮೆ ಗಂಟೆಗೆ ಹತ್ತು ಬಾರಿಯಾದರೂ ವಿದ್ಯುತ್ ಕಡಿತಗೊಳ್ಳುತ್ತದೆ. ಜೊತೆಗೆ ಕೆಲವು ಬಡಾವಣೆಗಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೂ ವಿದ್ಯುತ್ ಪೂರೈಕೆ ಇರುವುದಿಲ್ಲ. ಇದರಿಂದ ಕುಡಿಯುವ ನೀರಿಗೂ ಪರದಾಡುವಂತಾಗುತ್ತದೆ. ಇದರ ಬಗ್ಗೆ ಸಾರ್ವಜನಿಕರು ದೂರವಾಣಿ ಕರೆ ಮಾಡಿದರೆ ಯಾವ ಅಧಿಕಾರಿಯೂ ಕರೆ ಸ್ವೀಕರಿಸುವುದಿಲ್ಲ ಎಂದು ಆರೋಪಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry