ಮೈಸೂರು: ನಗರಕ್ಕೆ ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಂಗಣ, ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕಾಯಂ ಮಳಿಗೆ ನಿರ್ಮಾಣಕ್ಕೆ ನೆರವು, ಮೈಸೂರಿನ ಪೂರ್ವ ಭಾಗದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ, ಗ್ರಾಮೀಣ ಪ್ರದೇಶನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ, ಕಾವೇರಿ ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರರ ಬಲವರ್ಧನೆಗೆ ನೆರವು ದೊರಕಿಸಿ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ ಏಪ್ರಿಲ್ 19ರಂದು ಮೈಸೂರಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಿದ ಜನಪ್ರತಿನಿಧಿಗಳ ಪೂರ್ವಭಾವಿ ಸಭೆಯಲ್ಲಿ ಮೂಡಿಬಂದ ಒತ್ತಾಯಗಳಲ್ಲಿ ಕೆಲವು ಇವು.

ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ವರ್ಷ 27 ಕೋಟಿ ರೂ. ಅನುದಾನ ಒದಗಿಸಲಾ ಗಿದ್ದು, ಈ ವರ್ಷವೂ ಅದೇ ಮೊತ್ತದ ಅನುದಾನಕ್ಕೆ ಯೋಜನೆ ರೂಪಿಸಿ ಕೋರಿಕೆ ಸಲ್ಲಿಸಲಾಗಿತ್ತು. ಆದರೆ 1.65 ಕೋಟಿ ರೂ. ಅನುದಾನ ಕಡಿಮೆ ಆಗಿದೆ. ಹೆಚ್ಚು ಹಣ ಕೊಡಿಸಿ ಎಂದು ಪ್ರಾಧಿಕಾರದ ಅಧ್ಯಕ್ಷ ಡಿ. ರಾಮಲಿಂಗಯ್ಯ ಮನವಿ ಮಾಡಿದರು.

ನೀರಾವರಿ ಬಳಕೆದಾರರ ಸಂಘಗಳನ್ನು ಬಲಪಡಿಸಲು ಯೋಜನೆ ರೂಪಿಸುವಂತೆ ಸಲಹೆ ಮಾಡಿದ ಸಚಿವ ರಾಮದಾಸ್ ಅವರು ಹೆಚ್ಚುವರಿ ಅನುದಾನಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವರ್ಷಪೂರ್ತಿ ವಿವಿಧ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ಕಾಯಂ ಮಳಿಗೆ ನಿರ್ಮಾಣಕ್ಕೆ ನೆರವು ಒದಗಿಸಬೇಕು. ನಗರದ ಬೇರೆಬೇರೆ ಭಾಗದಲ್ಲಿ ನಡೆಯುತ್ತಿರುವ ಖಾಸಗಿ ವಸ್ತುಪ್ರದರ್ಶನಗಳನ್ನು ವಸ್ತುಪ್ರದರ್ಶನ ಆವರಣಕ್ಕೆ ಆಕರ್ಷಿಸಬಹುದಾಗಿದೆ. ಸಭೆ ಸಮಾರಂಭ ನಡೆಸಲು ಕಾಯಂ ವ್ಯವಸ್ಥೆ ಮಾಡಬಹುದಾಗಿದೆ. ಇದಕ್ಕೆ ಸಮಗ್ರ ಯೋಜನೆ ರೂಪಿಸಿದ್ದು, ಮಂಜೂರಾತಿ ದೊರಕಿಸಿಕೊಡುವಂತೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಮಂಜುನಾಥ್ ಕೋರಿದರು.

ಮೈಸೂರು ಮಹಾನಗರ ಪಾಲಿಕೆಯಿಂದಲೂ ಪ್ರಾಧಿಕಾರದ ಆವರಣ ಅಭಿವೃದ್ಧಿಗೆ ಕೆಲವು ಯೋಜನೆ ರೂಪಿಸಿದೆ. ಇವುಗಳು ಸೇರಿದಂತೆ ವಸ್ತುಪ್ರದರ್ಶನ ಆವರಣ ಎಲ್ಲಾ ಸಮಯದಲ್ಲಿಯೂ ಬಳಕೆ ಬರುವಂತೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುವಂತೆ ಯೋಜನೆ ರೂಪಿಸಿ, ನೆರವು ಒದಗಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ಮೈಸೂರಿನಲ್ಲಿ ಅಂತರ ರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವೊಂದನ್ನು ನಿರ್ಮಿಸಲು ಕ್ರಮ ವಹಿಸುವಂತೆ ಶಾಸಕ ತನ್ವೀರ್ ಸೇಠ್ ಸಲಹೆ ಮಾಡಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಹರ್ಷಗುಪ್ತ ಕ್ರೀಡಾ ಗ್ರಾಮವೊಂದರ ಅವಶ್ಯಕತೆಯೂ ಮೈಸೂರಿಗೆ ಇದ್ದು ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಹೇಳಿದರು.

ಮೈಸೂರು ಮೃಗಾಲಯಕ್ಕೆ ಆಗಮಿಸುವ ಪ್ರವಾಸಿಗರ ವಾಹನಗಳ ಪಾರ್ಕಿಂಗ್ ಸಮಸ್ಯೆ ಪ್ರಸ್ತಾಪಿಸಿದ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ನಂಜುಂಡಸ್ವಾಮಿ ಅವರು ಬಹುಹಂತದ ಪಾರ್ಕಿಂಗ್ ವ್ಯವಸ್ಥೆ ರೂಪಿಸಬೇಕಾಗಿದೆ ಎಂದರು. ಕಾರಂಜಿ ಕೆರೆಗೆ ಕೊಳಚೆ ನೀರು ಸೇರುತ್ತಿದ್ದು, ಆಗಮಿಸುವ ಪಕ್ಷಿಗಳ ಸಂಖ್ಯೆ ಕೂಡ ಕಡಿಮೆಯಾಗುತ್ತಿದೆ. ಈ ಬಗ್ಗೆಯೂ ಗಮನ ಹರಿಸಬೇಕಾಗಿದೆ ಎಂದರು. ನರ್ಮ್ ಯೋಜನೆಯಡಿ ಈಗಾಗಲೇ ಹಲವು ಯೋಜನೆ ರೂಪಿಸಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಯೋಜನೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದರು.

ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ವಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಡಾ: ಶಿವರಾಂ ಗಮನ ಸೆಳೆದರು.
ನಂತರ ಸಚಿವ ರಾಮದಾಸ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಖ್ಯ ಕಾಮಗಾರಿಗಳ ಮಾಹಿತಿ ಪಡೆದರು. ಈಗಾಗಲೇ ಜಾರಿಯಾಗಿರುವ ಯೋಜನೆಗಳ ಅನುಷ್ಠಾನದಲ್ಲಿ ಇರುವ ತೊಡಕುಗಳ ನಿವಾರಣಾ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದರು.

ಮುಖ್ಯಮಂತ್ರಿಗಳ ಜಿಲ್ಲಾ ಪ್ರಗತಿ ಪರಿಶೀಲನಾ ಕಾರ್ಯಕ್ರಮದಲ್ಲಿ ಮೈಸೂರು ಮೊದಲನೆ ಜಿಲ್ಲೆಯಾಗಿದ್ದು, ಇತರೆ ಜಿಲ್ಲೆಗಳಿಗೆ ಮಾದರಿಯಾಗುವ ರೀತಿಯಲ್ಲಿ ಪ್ರಗತಿ ವಿವರ ತಯಾರಿಸಿ ಮಂಡಿಸುವಂತೆ ಸಚಿವರು ಸೂಚಿಸಿದರು.ಜಿಲ್ಲಾಧಿಕಾರಿ ಹರ್ಷಗುಪ್ತ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗೋಪಾಲ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.