ಜೀತ ನಿರ್ಮೂಲನೆಗೆ ಆಗ್ರಹಿಸಿ ಪ್ರತಿಭಟನೆ

ಮಂಗಳವಾರ, ಜೂಲೈ 16, 2019
28 °C

ಜೀತ ನಿರ್ಮೂಲನೆಗೆ ಆಗ್ರಹಿಸಿ ಪ್ರತಿಭಟನೆ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜೀವಂತವಾಗಿರುವ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಶುಕ್ರವಾರ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ ವತಿಯಿಂದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಡಿವೈಎಫ್‌ನ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ವಾಸಿಸುತ್ತಿರುವ ದಲಿತ ಹಾಗೂ ಆದಿವಾಸಿಗಳು ವಾಸಿಸಲು ಸ್ವಂತ ಮನೆಯಾಗಲಿ, ಕೃಷಿ ಚಟುವಟಿಕೆ ಮಾಡಲು ಯಾವುದೇ ಭೂಮಿ ಕೂಡ ಇಲ್ಲವಾಗಿದೆ ಎಂದರು.ಕಳೆದ ಹಲವು ತಲೆಮಾರುಗಳಿಂದ ಈ ಪದ್ಧತಿ ಹೀಗೆಯೇ ಮುಂದುವರೆದು ಕೊಂಡು ಬರುತ್ತಿದ್ದು, ಕಾರ್ಮಿಕರಿಗೆ ಸೂಕ್ತ ಸೌಲಭ್ಯಗಳು ದೊರಕುತ್ತಿಲ್ಲ. ಈ ರೀತಿಯ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.ಬಡ ಕಾರ್ಮಿಕರನ್ನು ಜೀತ ಪದ್ಧತಿಯಿಂದ ಮುಕ್ತ ಗೊಳಿಸಿ, ಮೂಲ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ರುವ ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿರುವ ಭೂಮಿಯನ್ನು ತೆರವುಗೊಳಿಸಿ ಬಡವರಿಗೆ ಹಂಚಬೇಕು ಎಂದು ಅವರು ಒತ್ತಾಯಿಸಿದರು.ಡಿವೈಎಫ್‌ನ ಜಿಲ್ಲಾ ಸಮಿತಿಯ ಸದಸ್ಯರಾದ ಮೊಣ್ಣಪ್ಪ, ಅಶ್ರಫ್, ಮಹೇಶ್, ಭಾಗಲಕ್ಷ್ಮಿ ಚಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಪ್ರಗತಿ ಪರ ಸಂಘಟನೆಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿನ್ಸಂಟ್ ಬಾಬು ನೇತೃತ್ವದಲ್ಲಿ ಕಿರುಗೂರಿನ ಹೊಳೆಕೆರೆ ಕಾಲೋನಿಗೆ ಸಾರ್ವಜನಿಕ ರಸ್ತೆ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry