ಮಂಗಳವಾರ, ಏಪ್ರಿಲ್ 13, 2021
31 °C

ಜೀವನದಲ್ಲಿ ಮೌಲ್ಯಗಳನ್ನು ರೂಪಿಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಸಮಾಜ ಸುಧಾರಣೆಯಲ್ಲಿ ಹೆಣ್ಣು ಮಕ್ಕಳ ಪಾತ್ರ ಮಹತ್ವವಾಗಿದೆ. ಆದ್ದರಿಂದ ಅವರು ಜವಾಬ್ದಾರಿಯುತವಾಗಿ ಜೀವನದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಕೆ.ರಾಜು ತಿಳಿಸಿದರು.ರಾಮನಗರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ವತಿಯಿಂದ ಬಿಳಗುಂಬ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಶಿಬಿರದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದ ಮಂಜುಳಾದೇವಿ, ವಿದ್ಯಾರ್ಥಿ ಜೀವನದಲ್ಲೆ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಹೆಚ್ಚಿನ ಜವಾಬ್ದಾರಿಗಳು ಇರುವುದರಿಂದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಬಾಲ್ಯ ವಿವಾಹವನ್ನು ಸ್ವತಃ ನೀವೆ ವಿರೋದಿಸುವ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಗೆ ಮುಂದಾಗಬೇಕು ಎಂದು ಕರೆ ನೀಡಿದರು.ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹೆಚ್.ಮರಿಸ್ವಾಮಿ ಮಾತನಾಡಿ, ದೇಶದ ಶಾಂತಿ ಭದ್ರತೆಗೆ ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಬುದ್ಧಿಶಾಲಿಗಳಾಗಬೇಕೆಂದರು.ಶಿಬಿರದಲ್ಲಿ ಬಿಳಗುಂಬ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಮ್ಮ, ಸದಸ್ಯ ಕೃಷ್ಣಪ್ಪ, ಮುಖ್ಯಶಿಕ್ಷಕ ನಾಗಭೈರಯ್ಯ ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.