ಮಂಗಳವಾರ, ಜೂನ್ 22, 2021
27 °C

ಜೀವನದ ಯಶಸ್ಸಿಗೆ ಆತ್ಮಸ್ಥೈರ್ಯ ಮುಖ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: `ಪ್ರತಿಯೊಬ್ಬ ವ್ಯಕ್ತಿ ತಮ್ಮಲ್ಲಿರುವ ಜ್ಞಾನ ಪ್ರತಿಭೆಯನ್ನು ಸಮಾಜಕ್ಕೆ ನೀಡುವ ಕೆಲಸ ಮಾಡಬೇಕು. ಆತ್ಮಸ್ಥೈರ್ಯ ಹಾಗೂ ವಿಶ್ವಾಸ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು~ ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಅರ್ಜುನ ದೇವಯ್ಯ ಹೇಳಿದರು.ಇಲ್ಲಿನ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಒಂದು ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.`ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯು ಗುರಿಯನ್ನು ಇಟ್ಟುಕೊಳ್ಳಬೇಕು. ಆ ಗುರಿಯನ್ನು ತಲುಪುವವರೆಗೆ ಶ್ರದ್ಧೆಯಿಂದ ಓದಬೇಕು~ ಎಂದರು.`ಜೀವನದಲ್ಲಿ ಕೌಶಲದ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಸ್ವಾರ್ಥದಿಂದ ಬೆಳೆಯಿರಿ ಆದರೆ ಸ್ವಾರ್ಥವೇ ಜೀವನದ ಪ್ರಮುಖ ಅಂಶವಾಗಬಾರದು~ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.`ನಿಮ್ಮಲ್ಲಿರುವ ಯುವಚೇತನವನ್ನು ಬಡಿದೆಬ್ಬಿಸಿ. ಸಮಾಜದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರವನ್ನು ತೊಲಗಿಸಲು ಕೈ ಜೋಡಿಸಿ. ಸೋಲಿಗೆ ಚಿಂತಿಸಬೇಡಿ. ಸೋಲೇ ಗೆಲುವಿನ ಸೋಪಾನ~ ಎಂದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಬಾಬಾ ಭೂಸದ, ಪಿ.ಯು ಕಾಲೇಜಿನ ಪ್ರಾಚಾರ್ಯ ಎ.ಸಿ. ಗಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಾಜರಿದ್ದರು.ಪದವಿ ಕಾಲೇಜಿನ ಪ್ರಾಚಾರ್ಯ ಆನಂದ ಕೆ. ಮುಳಗುಂದ ಸ್ವಾಗತಿಸಿದರು. ಅನುಷಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಸಿ.ಎಸ್ ಪಾಟೀಲ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.