ಬೆಳಗಾವಿ: ಸುವರ್ಣಸೌಧ ಕಾಮಗಾರಿ ಏಪ್ರಿಲ್ 25 ರೊಳಗೆ ಪೂರ್ಣಗೊಳ್ಳಲಿದೆ. ಜೂನ್ನಲ್ಲಿ ವಿಧಾನಮಂಡಲ ಅಧಿವೇಶನವನ್ನು ಇಲ್ಲಿಯೇ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.

ಬೆಳಗಾವಿ ಹೊರವಲಯದ ಹಲಗಾ ಬಳಿ ನಿರ್ಮಾಣವಾಗುತ್ತಿರುವ ಸುವರ್ಣಸೌಧ ಕಾಮಗಾರಿಯನ್ನು ಶನಿವಾರ ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

`ವಿವಿಧ ಕಾರಣಗಳಿಂದಾಗಿ ಕಾಮಗಾರಿ ಪೂರ್ಣವಾಗಿಲ್ಲ. ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡಾಗ ಸ್ವಲ್ಪ ವಿಳಂಬವಾಗುವುದು ಸಹಜ. ಇನ್ನು ಬಹಳ ವಿಳಂಬವಾಗುವುದಿಲ್ಲ~ ಎಂದು ಅವರು ಹೇಳಿದರು.

`ಸಿವಿಲ್ ಕಾಮಗಾರಿ ಶೇ 95 ರಷ್ಟು ಪೂರ್ಣಗೊಂಡಿದೆ. ಆಸನ, ಕುಡಿಯುವ ನೀರು, ಧ್ವನಿ ಹಾಗೂ ಬೆಳಕು ಒದಗಿಸುವ ಕಾಮಗಾರಿಯೂ ಭರದಿಂದ ಸಾಗಿದೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.